Connect with us

Dvgsuddi Kannada | online news portal | Kannada news online

ದಾವಣಗೆರೆ: ಉತ್ತಮ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ, ಸಂಸ್ಥೆಗಳಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ

images 52

ಪ್ರಮುಖ ಸುದ್ದಿ

ದಾವಣಗೆರೆ: ಉತ್ತಮ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ, ಸಂಸ್ಥೆಗಳಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ: ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 1 ಸಂಸ್ಥೆಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ವಿವಿಧ ಕ್ಷೇತ್ರಗಳಲ್ಲಿ (ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಪ್ರತಿಭೆ/ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ) ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 6 ವೈಯಕ್ತಿಕ ಪ್ರಶಸ್ತಿಗಳನ್ನು ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 1 ಸಂಸ್ಥೆಗೆ ಪ್ರಶಸ್ತಿ ಸೇರಿ ಒಟ್ಟು 7 ಪ್ರಶಸ್ತಿಗಳನ್ನು ನೀಡಲಾಗುವುದು.

ಅರ್ಹ ಹಿರಿಯ ನಾಗರಿಕರು ಹಾಗೂ ಸಂಸ್ಥೆಗಳು ವೆಬ್‍ಸೈಟ್ www.dwdsc.karnataka.gov.in ಮೂಲಕ ಅಥವಾ ನಗರದ ಎಂ.ಸಿ.ಸಿ. ‘ಬಿ’ ಬ್ಲಾಕ್ ನಲ್ಲಿರುವ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿಗಳ ಕಛೇರಿಯಲ್ಲಿ ಅರ್ಜಿ ಪಡೆದು ಆಗಸ್ಟ್ 14 ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂ. ಸಂ: 08192-263939 ಹಾಗೂ ಹಿರಿಯ ನಾಗರಿಕರ ಸ. ಕೇಂದ್ರದ ದೂ. ಸಂ: 08192236784 ಸಂಪರ್ಕಿಸಲು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಡಾ. ಕೆ.ಕೆ. ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top