ದಾವಣಗೆರೆ; ದಾವಣಗೆರೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ವೆಂಕಟೇಶ್ ಎಂ.ವಿ. ಇವರು ಇಂದು (ಜುಲೈ 26) ಅಧಿಕಾರ ವಹಿಸಿಕೊಂಡರು. ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಶಿವಾನಂದ ಕಾಪಾಶಿ ಅವರು ಪುಷ್ಪ ಗುಚ್ಚ ನೀಡಿ ನೂತನ ಜಿಲ್ಲಾಧಿಕಾರಿಯವರಿಗೆ ಸ್ವಾಗತಿಸಿದರು.
ದಾವಣಗೆರೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ವೆಂಕಟೇಶ್ ಎಂ.ವಿ. ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಕಳೆದ ಒಂದು ವರ್ಷದಿಂದ ದಾವಣಗೆರೆ ಜಿಲ್ಲಾಧಿಕಾರಿಯಾಗಿದ್ದ ಶಿವಾನಂದ ಕಾಪಶಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಪಶುಸಂಗೋಪನೆ ಇಲಾಖೆಯ ಆಯುಕ್ತರಾಗಿದ್ದ 2009 ನೇ ಐಎಎಸ್ ಅಧಿಕಾಟರಿ ಡಾ. ವೆಂಕಟೇಶ ಅವರನ್ನು ದಾವಣಗೆರೆ ಜಿಲ್ಲಾಧಿಕಾರಿಯಾಗಿದ್ದಾರೆ.



