ದಾವಣಗೆರೆ: ಕನ್ನಡ ಪುಸ್ತಕ ಪ್ರಾಧಿಕಾರದಿಂದ ಶೇ.50% ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟದಾವಣಗೆರೆ: 2023 ಸಾಲಿನ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್ ತಿಂಗಳಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು.
ಸಾಹಿತ್ಯ ಕೃತಿಗಳ ಸುಮಾರು 704 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದ್ದು, ಅತ್ಯಂತ ಮೌಲಿಕವಾದ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಹೊಂದಿದೆ. ಆಸಕ್ತರು ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆ, ಜಿಲ್ಲಾ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ರಿಯಾಯಿತಿ ಸೌಲಭ್ಯ ಪಡೆದುಕೊಳ್ಳಬಹುದು.
ಕನ್ನಡ ಪುಸ್ತಕ ಪ್ರಾಧಿಕಾರದ ಆನ್‍ಲೈನ್ ವೆಬ್‍ಸೈಟ್ www.kannadapustakapradhikara.com ಮೂಲಕ ಪುಸ್ತಕಗಳನ್ನು ಖರೀದಿಸಬಹುದು ಎಂದು ಆಡಳಿತಾಧಿಕಾರಿ ಕೆ.ಬಿ ಕಿರಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.