Connect with us

Dvgsuddi Kannada | online news portal | Kannada news online

ದಾವಣಗೆರೆ: ಬಿಜೆಪಿ ಆಡಳಿತ ಅವಧಿಯಲ್ಲಿ ಉದ್ಯಾನವನಕ್ಕೆ ಮೀಸಲಿಟ್ಟ ಜಾಗ ಕಬಳಿಕೆ; ಕಾಂಗ್ರೆಸ್ ನಾಯಕರ ಆರೋಪ

ದಾವಣಗೆರೆ

ದಾವಣಗೆರೆ: ಬಿಜೆಪಿ ಆಡಳಿತ ಅವಧಿಯಲ್ಲಿ ಉದ್ಯಾನವನಕ್ಕೆ ಮೀಸಲಿಟ್ಟ ಜಾಗ ಕಬಳಿಕೆ; ಕಾಂಗ್ರೆಸ್ ನಾಯಕರ ಆರೋಪ

ದಾವಣಗೆರೆ: ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಆಡಳಿತಾವಧಿಯಲ್ಲಿ ಉದ್ಯಾನವನಕ್ಕೆ ಮೀಸಲಿಟ್ಟ ಜಾಗ ಕಬಳಿಕೆ ಮಾಡಿದ್ದಾರೆ. ಒಂದೊಂದೇ ಅಕ್ರಮಗಳು ಬಯಲಿಗೆ ಬರುತ್ತಿದ್ದು, ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಪಾಲಿಕೆ ವ್ಯಾಪ್ತಿಯ ಖಾಲಿ ಜಾಗ, ರಾಜಕಾಲುವೆ, ಉದ್ಯಾನವನ ಕಬಳಿಸಲಾಗಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆದರೆ ಸತ್ಯಾಸತ್ಯತೆ ಹೊರಬರಲಿದೆ ಎಂದು ಪಾಲಿಕೆಯ ಸದಸ್ಯ ಎ.ನಾಗರಾಜ್ ಹೇಳಿದರು.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಹಾನಗರ ಪಾಲಿಕೆಯ ಎಸ್. ಎಸ್. ಬಡಾವಣೆ 23 ನೇ ವಾರ್ಡ್ ಗೆ ಸೇರಿದ ಸರ್ಕಾರಿ ಜಾಗವನ್ನು ಕಬಳಿಸಲಾಗಿದೆ. ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿ ಮಾರಾಟ ಮಾಡಿದ್ದಾರೆ. ನಗರದ ಲಕ್ಷ್ಮೀ ಫ್ಲೋರ್ ಮಿಲ್ ಬಳಿ ಇರುವ ಪಾಲಿಕೆಯ ವಲಯ -2 ಕ್ಕೆ ಸಂಬಂಧಿಸಿದಂತೆ ಗ್ರಾಮಪಂಚಾಯಿತಿ ರಿ. ಸರ್ವೆ ನಂ. 78/2 ಜಾಗಕ್ಕೆ ಡೋರ್ ನಂಬರ್ ಕೊಟ್ಟು 3937/11, 3937/12, 3937/13, 3937/14 ರಲ್ಲಿ ತಲಾ 30*40 ಅಳತೆಯ ಸೈಟ್ ಗಳನ್ನಾಗಿ ವಿಂಗಡಿಸಿ ನಾಲ್ಕು ಮಂದಿಗೆ ನೋಂದಣಿ ಮಾಡಿಕೊಳ್ಳಲು ಪಾಲಿಕೆಯಿಂದಲೇ ಖಾತೆ ಮಾಡಿಕೊಡಲಾಗಿದೆ ಎಂದರು.

ಸರ್ಕಾರಿ ಖಾಲಿ ನಿವೇಶನ ಮೀಸಲಿಟ್ಟಿದ್ದದ್ದು ಸಾರ್ವಜನಿಕರ ಬಳಕೆಗಾಗಿ. ಆಸ್ಪತ್ರೆ, ಪಾರ್ಕ್ ಅಥವಾ ಶಾಲೆ ಸೇರಿದಂತೆ ಜನರಿಗಾಗಿ ಎಸ್ ಎಸ್ ಬಡಾವಣೆಯ ಈ ಜಾಗ ಕಾಯ್ದಿರಿಸಲಾಗಿತ್ತು. ಮಧ್ಯವರ್ತಿಗಳು ಹಾಗೂ ಪಾಲಿಕೆಯ ಸಿಬ್ಬಂದಿ ಸೇರಿ ಆಸ್ತಿ ವಿವರದ ಎಂಎಆರ್ -19, ಕೆಎಂಎಫ್-24 ಆಸ್ತಿ ವಿವರದ ದಾಖಲೆ ಪುಸ್ತಕಗಳಲ್ಲಿ ತಿದ್ದುಪಡಿ ಮಾಡಿ ಕ್ರಯ ಮಾಡಲು ಹಾಗೂ ಮಾರಾಟ ಮಾಡಲು ಅನುಕೂಲ ಮಾಡಿಕೊಟ್ಟಿದ್ದು, ಈಗಾಗಲೇ ಈ ನಿವೇಶನಗಳಿಗೆ ಡೋರ್ ನಂಬರ್ ಕೊಟ್ಟು ಖಾತೆ ಕೂರಿಸಲಾಗಿದೆ.

ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿಯೂ ರಿಜಿಸ್ಟರ್ ಆಗಿದೆ. ಮೇಲಾಧಿಕಾರಿಗಳ ಅನುಮತಿ ಇಲ್ಲದೇ, ಮೂಲ ದಾಖಲಾತಿ ಪರಿಶೀಲಿಸದೇ, ಪಾಲಿಕೆ ಉದ್ಯಾನವನ ಜಾಗವನ್ನು ಅಕ್ರಮವಾಗಿ ನಮೂನೆ -3ರಲ್ಲಿ ಸೇರಿಸಿ ಡೋರ್ ನಂಬರ್ ಕೊಡಲಾಗಿದೆ. ತಪ್ಪು ಎಸಗಿದ ಕಾರಣಕ್ಕೆ ಕಳೆದ ಜುಲೈ 14ರಂದು ಪಾಲಿಕೆಯ ಕಂದಾಯ ಇಲಾಖೆಯ ಕರ ವಸೂಲಿಗಾರ ಸಿ. ಸುನೀತಾ ಅವರನ್ನು ಅಮಾನತುಗೊಳಿಸಲಾಗಿದೆ. ಡೋರ್ ನಂಬರ್ 1882/81 A ಅಳತೆ 115*115 ಅಡಿಗಳ ಸ್ವತ್ತು ಅಕ್ರಮವಾಗಿ ಬೇರೆಯವರಿಗೆ ಮಾಡಿಕೊಡಲಾಗಿದೆ. ಬಿಜೆಪಿಯವರು ಇದೇ ರೀತಿಯಲ್ಲಿ ಹಲವೆಡೆ ಮಾಡಿದ್ದು ಒಂದೊಂದಾಗಿಯೇ ಹೊರಗೆ ಬರಲಿದೆ.

ಖಾಸಗಿ ಬಡಾವಣೆಗಳ ಮಾಲೀಕರ ಜೊತೆಗೆ ಶಾಮೀಲಾಗಿ ಕೆಲ ಬಡಾವಣೆಗಳಲ್ಲಿ ಪಾರ್ಕ್ ಉದ್ದೇಶಕ್ಕೆ ಇಟ್ಟಂಥ ಜಾಗಗಳಿಗೆ ಅಕ್ರಮವಾಗಿ ಡೋರ್ ನಂಬರ್ ನೀಡಿದ ಪ್ರಕರಣಗಳಿವೆ. ಸರ್ಕಾರಿ ಜಾಗಗಳನ್ನು ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಸರ್ಕಾರಿ ಜಾಗಗಳನ್ನು ಸರ್ಕಾರದ ವಶಕ್ಕೆ ಮರಳಿ ಪಡೆಯಬೇಕು. ಇನ್ನು ಕೆಲವು ಕಡೆಗಳಲ್ಲಿ ಇದೇ ರೀತಿಯ ಅಕ್ರಮಗಳನ್ನು ಮಾಡಿದ್ದು, ದಾಖಲೆ ಸಮೇತ ಮುಂದಿನ ದಿನಗಳಲ್ಲಿ ಬಯಲು ಮಾಡುವುದಾಗಿ ತಿಳಿಸಿದರು. ನೂತನ ಖಾಸಗಿ ಬಸ್ ನಿಲ್ದಾಣ, ಅಶೋಕ ರಸ್ತೆಯಲ್ಲಿನ ಅಂಡರ್ ಬ್ರಿಡ್ಜ್ ಕಾಮಗಾರಿಗಳು ಅವೈಜ್ಞಾನಿಕವಾಗಿದೆ. ಕಮೀಷನ್ ಆಸೆಗಾಗಿ ಬೇಕಾಬಿಟ್ಟಿಯಾಗಿ ನಿರ್ಮಾಣ ಮಾಡಿರುವ ಬಿಜೆಪಿಯವರು ಇದರಿಂದ ಹಣ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರುಗಳಾದ ಮಂಜುನಾಥ್ ಗಡಿಗುಡಾಳ್, ಕೆ.ಚಮನ್ ಸಾಬ್, ನಾಗರಾಜ್ ಪಾಮೇನಹಳ್ಳಿ, ಉದಯ ಕುಮಾರ್, ಉಮೇಶ್, ಜಗದೀಶ್ ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top