Connect with us

Dvgsuddi Kannada | online news portal | Kannada news online

ದಾವಣಗೆರೆ: ಕೋಳಿ ಫಾರಂಗಳಿಂದ ಗ್ರಾಮಗಳಲ್ಲಿ ನೊಣ; ಮಾಲೀಕರಿಗೆ ನೋಟಿಸ್ ಜಾರಿ

images 4

ದಾವಣಗೆರೆ

ದಾವಣಗೆರೆ: ಕೋಳಿ ಫಾರಂಗಳಿಂದ ಗ್ರಾಮಗಳಲ್ಲಿ ನೊಣ; ಮಾಲೀಕರಿಗೆ ನೋಟಿಸ್ ಜಾರಿ

ದಾವಣಗೆರೆ; ದಾವಣಗೆರೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿರುವ ಕೋಳಿ ಫಾರಂಗಳ ಮಾಲೀಕರು ಹಾಗೂ ವ್ಯವಸ್ಥಾಪಕರಿಗೆ ಫಾರಂಗಳಲ್ಲಿನ ನ್ಯೂನ್ಯತೆಗಳನ್ನು ಸರಿಪಡಿಸಲು ಮತ್ತು ನೈರ್ಮಲ್ಯತೆಯನ್ನು ಕಾಪಾಡಿಕೊಳ್ಳಲು ನೋಟಿಸ್ ಜಾರಿ ಮಾಡಲಾಗಿದೆ.

ಕೋಳಿ ಫಾರಂಗಳ ತ್ಯಾಜ್ಯದಿಂದ ನೊಣಗಳ ಕಾಟ ಹೆಚ್ಚಿದ ಹಿನ್ನೆಲೆ ತಾಲ್ಲೂಕಿನ ವಿವಿಧ ಗ್ರಾಮಗಳ ಕೋಳಿ ಫಾರಂಗಳಿಗೆ ಉಪ ನಿರ್ದೇಶಕರು, ತಾಂತ್ರಿಕ ಸಹಾಯಕರು ಪಶುವೈದ್ಯ ತಜ್ಞರು ಹಾಗೂ ಪಶುವೈದ್ಯರೊಂದಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಭೇಟಿ ನೀಡಿದ್ದು, ಫಾರ್ಮ್‍ಗಳಲ್ಲಿ ಕಂಡುಬಂದಿರುವ ನ್ಯೂನ್ಯತೆಗಳನ್ನು ಸರಿಪಡಿಸಲು ಮತ್ತು ನೈರ್ಮಲ್ಯತೆಯನ್ನು ಕಾಪಾಡಿಕೊಳ್ಳಲು ಮತ್ತು ತಾಂತ್ರಿಕವಾಗಿ ಹಲವು ಸಲಹಾ ಸೂಚನೆಗಳನ್ನು ಒಂದು ವಾರದೊಳಗಡೆ ಅಳವಡಿಸಿಕೊಂಡು ನೊಣಗಳ ಹಾವಳಿಯನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲು ಫಾರಂ ಮಾಲೀಕರು, ವ್ಯವಸ್ಥಾಪಕರಿಗೆ ಸೂಚಿಸಲಾಗಿದೆ.

ಮರು ಪರಿಶೀಲನೆ ಮಾಡಿದಾಗ ನೊಣಗಳ ಹಾವಳಿಯನ್ನು ನಿಯಂತ್ರಿಸುವಲ್ಲಿ ವಿಫಲವಾದಲ್ಲಿ ಅಂತಹ ಕೋಳಿ ಫಾರಂಗಳನ್ನು ಮುಚ್ಚಿಸಲು ಮೇಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುವುದು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top