Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲಾ ಮಟ್ಟದ ನಾಮ ನಿರ್ದೇಶಕ ಸದಸ್ಯರ ನೇಮಕಕ್ಕೆ ಅರ್ಜಿ ಆಹ್ವಾನ

Davanagere DC office

ದಾವಣಗೆರೆ

ದಾವಣಗೆರೆ: ಜಿಲ್ಲಾ ಮಟ್ಟದ ನಾಮ ನಿರ್ದೇಶಕ ಸದಸ್ಯರ ನೇಮಕಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ಅಲೆಮಾರಿ, ಅರೆ ಅಲೆಮಾರಿ‌ ಜನಾಂಗದವರಿಗೆ ಸೌಲಭ್ಯ ಹಾಗೂ ಮೀಸಲಾತಿ ಕಲ್ಪಿಸುವಲ್ಲಿ ಜಿಲ್ಲಾ ಮಟ್ಟದ ಜಿಲ್ಲಾಧಿಕಾರಿಗಳಿಂದ ನಾಮ ನಿರ್ದೇಶಕ ಸದಸ್ಯರನ್ನು ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಮಾನದಂಡಗಳು ಹಾಗೂ ಸದಸ್ಯರ ಅರ್ಹತೆ ಮತ್ತು ಜವಾಬ್ದಾರಿಗಳು: ನಾಮ ನಿರ್ದೇಶನ ಬಯಸುವ ವ್ಯಕ್ತಿಯು ದಾವಣಗೆರೆ ಜಿಲ್ಲೆಯವರಾಗಿದ್ದು, 15 ವರ್ಷ ಜಿಲ್ಲೆಯಲ್ಲಿ ವಾಸವಾಗಿರಬೇಕು ಮತ್ತು ಅಲೆಮಾರಿ ಅರೆ ಅಲೆಮಾರಿ ಸಮುದಾಯಕ್ಕೆ ಸೇರಿದವರಾಗಿರಬೇಕು, ಕನಿಷ್ಠ 35 ರಿಂದ 65 ವರ್ಷಗಳಾಗಿರಬೇಕು. ಎಸ್.ಎಸ್.ಎಲ್.ಸಿ ಪೂರೈಸಿರಬೇಕು, ತಮ್ಮ ಜನಾಂಗದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ, ವಾಸಿಸುವ ಸ್ಥಳ, ಕೈಗೊಳ್ಳುತ್ತಿರುವ ಉದ್ಯೋಗದ ಬಗ್ಗೆ ಅಂಕಿ ಅಂಶಗಳ ಮಾಹಿತಿ ತಿಳಿದಿರಬೇಕು, ಅಲೆಮಾರಿ ಅರೆ ಅಲೆಮಾರಿ ಜನಾಂಗಕ್ಕೆ ಸಂಬಂಧಿಸಿದಂತೆ ಜನಾಂಗಕ್ಕೆ ಇರುವ ಮೀಸಲಾತಿ ಸೌಲಭ್ಯ ಹಾಗೂ ಕಲ್ಯಾಣ ಕಾರ್ಯಕ್ರಮಗಳ ಮಾಹಿತಿ ಹೊಂದಿರತಕ್ಕದ್ದು, ಯಾವುದೇ ರೀತಿಯ ಕ್ರಿಮಿನಲ್ ಮೊಕದ್ದಮೆಗಳು ಹಾಗೂ ದಂಡ, ಜುಲ್ಮನೆ, ಶಿಕ್ಷೆಗೆ ಒಳಗಾಗಿರಬಾರದು, ಸಮಿತಿಗಳಿಗೆ ನೇಮಿಸುವ ವ್ಯಕ್ತಿಯು ಸಮಾಜದಲ್ಲಿ ಗೌರವಾನ್ವಿತೆ ಹೊಂದಿ, ಮಾನಸಿಕವಾಗಿ ಸ್ವಾಸ್ಥ್ಯವಾಗಿರಬೇಕು.

ಅರ್ಜಿಯನ್ನು ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ 46, 2ನೇ ಮಹಡಿ, ಜಿಲ್ಲಾಡಳಿತ ಭನದಿಂದ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಲಿಖಿತ ಮನವಿಯನ್ನು ಆಗಸ್ಟ್ 21 ರ ಒಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.08192-262973 ಗೆ ಸಂಪರ್ಕಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಗಾಯತ್ರಿ ಕೆ.ಹೆಚ್ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top