ದಾವಣಗೆರೆ: ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಕೇಳಿದ್ದೇನೆ. ಕೊಟ್ರೆ ಸ್ಪರ್ಧಿಸಲು ಸಿದ್ಧ ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಅತ್ತೆಗೊಂದು ಕಾಲ, ಸೊಸೆಗೊಂದು ಕಾಲ ಎಂಬಂತೆ ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಈಗ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರ ಹಿಡಿದಿದೆ. ಕಾಂಗ್ರೆಸ್ ನಾಯಕರು ಯಾರೂ ಕಮಿಷನ್ ತೆಗೆದುಕೊಂಡಿಲ್ಲ. ಬಿಜೆಪಿಯವರು ಸುಳ್ಳು ಹೇಳುವುದರಲ್ಲ ನಿಸ್ಸೀಮರು. ಕೆಲಸ ಮಾಡಿರುವ ಬಿಲ್ ಕೊಟ್ಟೇ ಇಲ್ಲ ಎಂದ ಮೇಲೆ ಕಮಿಷನ್ ಎಲ್ಲಿಂದ ಬರುತ್ತದೆ ಎಂದರು.



