ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಸುಂಕದಕಟ್ಟೆ ನರಸಿಂಹಸ್ವಾಮಿ ಹಾಗೂ ಮಂಜುನಾಥ ಸ್ವಾಮಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಹುಂಡಿಯಲ್ಲು 49.70 ಲಕ್ಷ ಹಣ ಸಂಗ್ರಹವಾಗಿದೆ. ಈ ದೇವಸ್ಥಾನವು ಮುಜರಾಯಿ ಇಲಾಖೆಗೆ ಸೇರಿದ್ದಾಗಿದೆ.
ದೇವಸ್ಥಾನದ ಆಡಳಿತ ಮಂಡಳಿ ಸಮಿತಿ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಗುರುವಾರ ಹುಂಡಿಯನ್ನು ತೆರವುಗೊಳಿಸಿದ ಮುಜರಾಯಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಕೆನರಾ ಬ್ಯಾಂಕ್ ಸಿಬ್ಬಂದಿ ಹಣವನ್ನು ಎಣಿಕೆ ಮಾಡಿದರು ಎಂದು ತಹಶೀಲ್ದಾರ್ ಪಟ್ಟರಾಜ ಗೌಡ ಮಾಹಿತಿ ನೀಡಿದ್ದಾರೆ.
ಬೆಳಿಗ್ಗೆ 10ರಿಂದ ಸಂಜೆ 5ಗಂಟೆಯವರೆಗೆ ನಡೆದ ಹುಂಡಿ ಹಣ ಎಣಿಕೆ ಕಾರ್ಯದಲ್ಲಿ 38 ಸಿಬ್ಬಂದಿ ಪಾಲ್ಗೊಂಡಿದ್ದರು.ಹುಂಡಿಯ ಹಣವನ್ನು ಕೆನರಾ ಬ್ಯಾಂಕ್‌ನಲ್ಲಿರುವ ದೇವಸ್ಥಾನದ ಖಾತೆಗೆ ಜಮಾ ಮಾಡಲಾಗಿದೆ.



