Connect with us

Dvgsuddi Kannada | online news portal | Kannada news online

ದಾವಣಗೆರೆ: ವಿಕಲಚೇತನ ವಿದ್ಯಾರ್ಥಿಗಳಿಂದ ನ್ಯಾಷನಲ್ ಇ ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ವಿಕಲಚೇತನ ವಿದ್ಯಾರ್ಥಿಗಳಿಂದ ನ್ಯಾಷನಲ್ ಇ ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ

ದಾವಣಗೆರೆ: ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯು 2021-22ನೇ ಸಾಲಿನಲ್ಲಿ ನ್ಯಾಷನಲ್ ಇ ಸ್ಕಾಲರ್‍ ಶಿಪ್  ಪಡೆಯಲು ವಿಕಲಚೇತನ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರೀ-ಮೆಟ್ರಿಕ್ (9ನೇ ಮತ್ತು 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ) ವಿದ್ಯಾರ್ಥಿಗಳು ಆನ್‍ಲೈನ್‍ನಲ್ಲಿ ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 15 ಕೊನೆಯ ದಿನಾಂಕವಾಗಿರುತ್ತದೆ. ಕುಟುಂಬದ ಆದಾಯದ ಮಿತಿ ರೂ. 2.00 ಲಕ್ಷ ನಿಗದಿಪಡಿಸಲಾಗಿದೆ. ಪೋಸ್ಟ್ ಮೆಟ್ರಿಕ್ ಮತ್ತು ಟಾಪ್ ಕ್ಲಾಸ್ ವಿದ್ಯಾರ್ಥಿಗಳು ಆನ್‍ಲೈನ್‍ನಲ್ಲಿ ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿರುತ್ತದೆ. ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿವೇತನಕ್ಕೆ ಕುಟುಂಬದ ಆದಾಯದ ಮಿತಿ ರೂ. 2.50 ಲಕ್ಷ, ಟಾಪ್ ಕ್ಲಾಸ್ ವಿದ್ಯಾರ್ಥಿಗಳಿಗೆ ಕುಟುಂಬದ ಆದಾಯದ ಮಿತಿ ರೂ. 6.00 ಲಕ್ಷ ನಿಗದಿಪಡಿಸಿದೆ.

ಹೆಚ್ಚಿನ ಮಾಹಿತಿಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಚೇರಿ, ಶಂಕರಲೀಲಾ ಗ್ಯಾಸ್ ಏಜೆನ್ಸಿ ಹತ್ತಿರ, ಎಂ.ಸಿ.ಸಿ. ‘ಬಿ’ ಬ್ಲಾಕ್, ದಾವಣಗೆರೆ. ಹಾಗೂ ವಿಕಲಚೇತನರ ಸಹಾಯವಾಣಿ ಮತ್ತು ಮಾಹಿತಿ ಸಲಹಾ ಕೇಂದ್ರದ ದೂರವಾಣಿ ಸಂಖ್ಯೆ 08192-263939 ವಿಕಲಚೇತನರ ಮಾಹಿತಿ ಸಲಹೆಗಾರರು ಜೆ. ದುರುಗೇಶ್ ಮೊ.ಸಂ: 988647711, ಅಥವಾ ವೆಬ್‍ಸೈಟ್:www.scholarship.gov.in ಅನ್ನು ಸಂಪರ್ಕಿಸಬಹುದೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top