ದಾವಣಗೆರೆ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮತ್ತು ಜಿಲ್ಲಾ ಶಾಖೆಯಿಂದ ನಗರದ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ನವಂಬರ್ 27 ರಂದು ಮಧ್ಯಾಹ್ನ 3 ಗಂಟೆಗೆ ಪ್ರಸಕ್ತ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆ ಹಾಗೂ ಕರ್ನಾಟಕ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜನ್ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಪ್ರತಿಭಾ ಪುರಸ್ಕಾರ ಪ್ರಧಾನ ಮಾಡುವರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ವೀರೇಶ್.ಎಸ್.ಒಡೇನಪುರ ಅಧ್ಯಕ್ಷತೆ ವಹಿಸುವರು.
ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಹರಿಹರ ಶಾಸಕ ಬಿ.ಪಿ ಹರೀಶ್, ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ.ಇಟ್ನಾಳ್, ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ತಿಮ್ಮೇಗೌಡ, ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ್.ಬಿ.ಬಳ್ಳಾರಿ, ಗೌರವಾಧ್ಯಕ್ಷ ಬಿ.ಹೆಚ್ ವೆಂಕಟೇಶಯ್ಯ, ಹಿರಿಯ ಉಪಾಧ್ಯಕ್ಷ ಎಂ.ವಿ ರುದ್ರಪ್ಪ, ಎಸ್.ಬಸವರಾಜು ಉಪಾಧ್ಯಕ್ಷರಾದ ಆರ್.ಮೋಹನ್ ಕುಮಾರ್, ಎಸ್.ಸಿದ್ದೇಶ್ವರ, ಡಾ.ನೆಲ್ಕುದ್ರಿ ಸದಾನಂದಪ್ಪ ಉಪಸ್ಥಿತರಿರುವರು.
ಕಾರ್ಯಕ್ರಮದಲ್ಲಿ ಹ್ಯೂಮನ್ ಮೈಂಡ್‍ಸೆಟ್ ಕೋಚ್ ಮಹೇಶ್ ಮಶ್ಯಾಳ್ ರವರಿಂದ ಪ್ರಜಾಸ್ನೇಹಿ ಆಡಳಿತದಲ್ಲಿ ನೌಕರರ ಪಾತ್ರ ಕುರಿತು ವಿಚಾರ ಸಂಕಿರಣ ಹಾಗೂ ಗಂಗಾವತಿ ಪ್ರಾಣೇಶ್ ತಂಡದವರಿಂದ ಹಾಸ್ಯ ಸಂಜೆ ಕಾರ್ಯಕ್ರಮವಿರುತ್ತದೆ.



