ದಾವಣಗೆರೆ; ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅನುಷ್ಟಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಮಧ್ಯವರ್ತಿಗಳು ದುರುಪಯೋಗ ಪಡಿಸಿಕೊಳ್ಳುತ್ತಿದ್ದು, ಈ ಕುರಿತು ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕು. ಮಧ್ಯವರ್ತಿಗಳು ಹಣ ವಸೂಲಿ ಮಾಡುತ್ತಿದ್ರೆ, ಈ ನಂಬರ್ ಗೆ ಕಾಲ್ ಮಾಡಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ವಾಸಂತಿ ಉಪ್ಪಾರ್ ಖಡಕ್ ಸೂಚನೆ ಕೊಟ್ಟಿದ್ದಾರೆ.
ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಆನ್‍ಲೈನ್ ಅಥವಾ ಭೌತಿಕವಾಗಿ ಅರ್ಜಿಗಳನ್ನು ಸಲ್ಲಿಸಲು ಸಾರ್ವಜನಿಕರು ನೇರವಾಗಿ ಇಲಾಖೆಯ ಜಿಲ್ಲಾ ಕಚೇರಿ ಅಥವಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ತೆರಳಿ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಥವಾ ಅಧಿಕಾರಿಗಳ ಹೆಸರಿನಲ್ಲಿ ಮಧ್ಯವರ್ತಿಗಳು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿರುವುದು ಕಂಡುಬಂದರೆ ಪೊಲೀಸ್ ಠಾಣೆ ಜಿಲ್ಲಾ ಕಛೇರಿ ದೂ.ಸಂ. 08192-264056 ಹಾಗೂ ಸಿ.ಡಿ.ಪಿ.ಓ. ಕಛೇರಿ ದೂ.ಸಂ. ದಾವಣಗೆರೆ- 9945767687, ಜಗಳೂರು- 9901521555,ಹರಿಹರ- 7829282991, ಹೊನ್ನಾಳಿ-7022105100, ಚನ್ನಗಿರಿ- 9449080657 ಗೆ ಕರೆ ಮಾಡಿ ದೂರು ನೀಡಬಹುದು ಎಂದು ತಿಳಿಸಿದ್ದಾರೆ.



