ದಾವಣಗೆರೆ: ನಾಳೆ (ಜ.22) ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ವೇಳೆ ಕಾನೂನು & ಸುವ್ಯವಸ್ಥೆ ಕಾಪಾಡಲು ಜಿಲ್ಲಾ ಪೊಲೀಸ್ , ಜಿಲ್ಲೆಯಾದ್ಯಂತ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ದಾವಣಗೆರೆ ನಗರಾದ್ಯಂತ ಸೂಕ್ಷ್ಮ ಪ್ರದೇಶಗಳಲ್ಲಿ ಹಗಲು ರಾತ್ರಿ ಡ್ರೋನ್ ಕಣ್ಗಾವಲು ಇರಿಸಲಾಗಿರುತ್ತದೆ. ಜಿಲ್ಲೆಯಾದ್ಯಂತ ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿ ಹಾಕಲಾಗಿರುತ್ತದೆ.
ಶ್ರೀರಾಮ ಮಂದಿರ ಉದ್ಘಾಟನೆಯ ಕಾರ್ಯಕ್ರಮದ ಅಂಗವಾಗಿ ದೇಶದ್ಯಾಂತ ಹಿಂದೂ ಭಾಂಧವರು ಸಂಭ್ರಮದಿಂದ ಆಚರಿಸುತ್ತಿದ್ದು, ಅದರಂತೆ ದಾವಣಗೆರೆ ಜಿಲ್ಲೆಯಲ್ಲೂ ಹಿಂದೂ ಬಾಂಧವರು ಆಯೋಧ್ಯಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಯ ಕಾರ್ಯಕ್ರಮದ ಸಂಬಂಧ ಸಂಭ್ರಮದಿಂದ ಆಚರಿಸುತ್ತಿದ್ದು, ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಈಗಾಗಲೇ ವಿವಿಧ ಕೋಮಿನ ಮುಖಂಡರುಗಳೊಂದಿಗೆ ಸಭೆ ನಡೆಸಿ ಜಿಲ್ಲೆಯ ಶಾಂತಿ & ಸೌಹಾರ್ಧತೆಗೆ ಯಾವುದೇ ಧಕ್ಕೆ ಬಾರದಂತೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ಹಲವು ಸೂಚನೆಗಳನ್ನು ನೀಡಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಸಾರ್ವಜನಿಕರು ಈ ಕೆಳಕಂಡ ಅಂಶಗಳನ್ನು ಪಾಲಿಸಲು ಕೋರಿದೆ.
- ಕಾನೂನು ಸುವ್ಯವಸ್ಥೆಗೆ ದಕ್ಕೆ ತರುವಂತಹವರ ಮತ್ತು ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ನಿರ್ಧಕ್ಷಣ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು.
- ಅಯೋಧ್ಯಯ ಶ್ರೀರಾಮ ಮಂದಿರ ಉದ್ಘಾಟನೆಯ ಸಂಭ್ರಮಾಚರಣೆಯ ಸಂಧರ್ಭದಲ್ಲಿ ಪ್ರಚೋಧನಕಾರಿ ಹಾಡುಗಳನ್ನು ಹಾಕುವುದು, ಪ್ರಚೋಧನಕಾರಿ ಘೋಷಣೆಗಳನ್ನು ಕೂಗುವುದು, ಪೋಸ್ಟರ್‌ಗಳನ್ನು ಪ್ರದರ್ಶಿಸುವುದಕ್ಕೆ ಅವಕಾಶ ಇರುವುದಿಲ್ಲ
- ಸಾರ್ವಜನಿಕ/ಜನ ಸಂದಣಿ ಪ್ರದೇಶಗಳಲ್ಲಿ ಪಟಾಕಿಗಳನ್ನು ಸಿಡಿಸಬಾರದು
- ಸಾರ್ವಜನಿಕ ಸಂಚಾರ ವ್ಯವಸ್ಥೆಗೆ ತೊಂದರೆಯಾಗದಂತೆ ಆಯೋಧ್ಯಯ ಶ್ರೀರಾಮ ಮಂದಿರ ಉದ್ಘಾಟನೆಯ ಸಂಭ್ರಮಾಚರಣೆಯ ಆಚರಿಸುವುದು
- ಸೂಕ್ಷ್ಮ ಪ್ರದೇಶಗಳಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳುವುದು
- ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದಕ ಹಾಗೂ ಧಾರ್ಮಿಕ ನಿಂದನೆ, ಸುಳ್ಳುಸುದ್ದಿ ಹರಡುವುದು, ಕಾನೂನು ಸುವ್ಯವಸ್ಥೆಗೆ ದಕ್ಕೆ ಬರುವಂತಹ ಪೋಸ್ಟ್ಗಳನ್ನು ಹಾಕುವುದಾಗಲೀ ಹಾಗು ಶೇರ್ ಮಾಡುವುದಾಗಲೀ ಕಂಡು ಬಂದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಾಲಾಗುವುದು
- ಅಯೋಧ್ಯಯ ಶ್ರೀರಾಮ ಮಂದಿರ ಉದ್ಘಾಟನೆಯ ಸಂಭ್ರಮಾಚರಣೆಯ ಸಂಧರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೇ ಶಾಂತಿಯುತವಾಗಿ ಹಾಗೂ ಸೌಹಾರ್ಧಯುತವಾಗಿ ಆಚರಿಸುವುದು, ಯಾವುದೇ ಅಹಿತಕರ ಘಟನೆಗಳು ಕಂಡುಬಂದರೆ ತುರ್ತು ಸಹಾಯವಣಿ 112 ಗೆ ಕರೆ ಮಾಡುವುದು ಹಾಗೂ ಸ್ಥಳೀಯ ಪೊಲೀಸ್ ಠಾಣೆ/ಪೊಲೀಸ್ ಅಧಿಕಾರಿ ಸಿಬ್ಬಂದಿಗಳಿಗೆ ಮಾಹಿತಿ ನೀಡಲು ಕೋರಲಾಗಿದೆ.



