ದಾವಣಗೆರೆ: ನಗರದ ಗುಂಡಿ ಮಹಾದೇವಪ್ಪ ಕಲ್ಯಾಣ ಮಂಟಪ ಪಕ್ಕದಲ್ಲಿ 50 ಲಕ್ಷ ವೆಚ್ಚದ ಸಿಸಿ ರಸ್ತೆ ಹಾಗೂ ಫುಡ್ ಕೋರ್ಟ್ ನಿರ್ಮಾಣಕ್ಕೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಚಾಲನೆ ನೀಡಿದರು.
ಚಾಲನೆ ನಂತರ ಮಾತನಾಡಿದ ಮಲ್ಲಿಕಾರ್ಜುನ್ , ಸಾರ್ವಜನಿಕರಿಗೆ ಉತ್ತಮ ಉಪಹಾರ ನೀಡುವಲ್ಲಿ ವ್ಯಾಪಾರಿಗಳು ಗಮನ ಹರಿಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯ ಪಾಮೇನಹಳ್ಳಿ ನಾಗರಾಜ್ ಹಾಗೂ ಪಾಲಿಕೆ ವಾರ್ಡಿನ ಸದಸ್ಯರಾದ ಗಡಿ ಗುಡಾಳ್ ಮಂಜುನಾಥ್ ಹಾಗೂ ಮಹಾನಗರ ಪಾಲಿಕೆ ಆಯುಕ್ತ ರೇಣುಕಾ, ಗುತ್ತಿಗೆದಾರ ಗಣೇಶ್ ಪಾಲಿಕೆಯ ಎ ಇಇ ನವೀನ್ನ, ನಗರ ಉಪಾಧ್ಯಕ್ಷ ಜಿಎಸ್ ಸಂತೋಷ್ , ಪಾದಚಾರಿ ವ್ಯಾಪಾರಿ ಘಟಕದ ಅಧ್ಯಕ್ಷ ಸುರೇಶ್.ರಾಘವೇಂದ್ರ, ಚಂದ್ರು, ಮಂಜುನಾಥ್ ಸೇರಿ ಮತ್ತಿತರರು ಉಪಸ್ಥಿತರಿದ್ದರು.



