Connect with us

Dvgsuddi Kannada | online news portal | Kannada news online

ದಾವಣಗೆರೆ: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ಯಾರಂಟಿ ಸಮಾವೇಶ; ಕುಂದುಕೊರತೆಗಳ ನಿವಾರಣೆಗೆ ಕ್ರಮ; ಜಿಲ್ಲಾಧಿಕಾರಿ ಡಾ: ವೆಂಕಟೇಶ್

ದಾವಣಗೆರೆ

ದಾವಣಗೆರೆ: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ಯಾರಂಟಿ ಸಮಾವೇಶ; ಕುಂದುಕೊರತೆಗಳ ನಿವಾರಣೆಗೆ ಕ್ರಮ; ಜಿಲ್ಲಾಧಿಕಾರಿ ಡಾ: ವೆಂಕಟೇಶ್

ದಾವಣಗೆರೆ: ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಾದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಯೋಜನೆ ಮಾಡುವ ಮೂಲಕ ಪಲಾನುಭವಿಗಳ ಕುಂದುಕೊರತೆ ನಿವಾರಣೆಗೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈಗಾಗಲೇ ಸಂವಿಧಾನ ಜಾಗೃತಿ ಜಾಥಾ ಅಭಿಯಾನ ನಡೆಯುತ್ತಿದ್ದು ಜಾಥಾ ಸಂಚರಿಸುವ ಗ್ರಾಮ ಪಂಚಾಯಿತಿಗಳಲ್ಲಿಯು ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆ ಕುರಿತು ಮಾಹಿತಿ ನೀಡಿ ಅವರ ಕುಂದುಕೊರತೆಗಳಿದ್ದಲ್ಲಿ ನಿವಾರಣೆಗೆ ಕ್ರಮವಹಿಸಬೇಕೆಂದರು.

ಯುವನಿಧಿಗೆ 4300 ನಿರುದ್ಯೋಗಿ ಪದವೀಧರರು ಹಾಗೂ ಡಿಪ್ಲೊಮಾ ಉತ್ತೀರ್ಣರಾದವರು ನೊಂದಾಯಿಸಿದ್ದು ಇದಕ್ಕೆ ಇನ್ನಷ್ಟು ವೇಗ ಹೆಚ್ಚಿಸಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೊಂದಣಿಗೆ ಕ್ರಮ ವಹಿಸಲು ಸೂಚನೆ ನೀಡಿ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿ ಹಾಗೂ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಗ್ಯಾರಂಟಿ ಸಮಾವೇಶ ಮತ್ತು ಕುಂದುಕೊರತೆಗಳ ನಿವಾರಣೆಗೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

ಈಗಾಗಲೇ ಜಿಲ್ಲಾ ಮಟ್ಟ ಹಾಗೂ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯನ್ನು ರಚಿಸಲಾಗಿದೆ ಎಂದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೃಷ್ಣನಾಯ್ಕ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top