ದಾವಣಗೆರೆ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಹುಟ್ಟಿನಿಂದಲೇ ಶ್ರವಣದೋಷವುಳ್ಳ ಮಕ್ಕಳ ತಾಯಂದಿರಿಗೆ ಪ್ರಾರಂಭಿಕ ಹಂತದಲ್ಲಿಯೇ ಅವರ ಮಗುವಿನ ಸಮಸ್ಯೆ, ಪರಿಹಾರದ ಬಗ್ಗೆ ಅರಿವು ಮೂಡಿಸಲು ತರಬೇತಿ ನೀಡಲು ಉದ್ದೇಶಿಸಲಾಗಿದ್ದು, ಅರ್ಹ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನಾಲ್ಕು ವರ್ಷದೊಳಗಿನ ಶ್ರವಣದೋಷವುಳ್ಳ ಮಕ್ಕಳಿಗೆ ಹಾಗೂ ಅವರ ತಾಯಂದಿರಿಗೆ ವಾಕ್ (ಸ್ಪೀಚ್) ವಸತಿರಹಿತ ತರಬೇತಿ ನೀಡಿ, ಭಾಷಾ ಬೆಳವಣಿಗೆಗೆ ಸಹಕಾರಿಯಾಗುವ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದನ್ವಯ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ತರಬೇತಿ ಕೇಂದ್ರ ಪ್ರಾರಂಭಿಸಲು ಸೂಕ್ತ ಮೂಲಭೂತ ಸೌಕರ್ಯ ಹೊಂದಿರುವ ಹಾಗೂ ಶ್ರವಣದೋಷ ಮಕ್ಕಳಿಗೆ ಮತ್ತು ಅವರ ತಾಯಂದಿರಿಗೆ ತರಬೇತಿ ನೀಡುವ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಅರ್ಹ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಅ.25 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಚೆÉೀರಿ, ಶಂಕರಲೀಲಾ ಗ್ಯಾಸ್ ಏಜೆನ್ಸಿ ಹತ್ತಿರ, ಎಂ.ಸಿ.ಸಿ. ‘ಬಿ’ ಬ್ಲಾಕ್, ದಾವಣಗೆರೆ.ವಿಕಲಚೇತನರ ಸಹಾಯವಾಣಿ ದೂರವಾಣಿ: 08192-263939 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಡಾ.ಕೆ.ಕೆ.ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



