ದಾವಣಗೆರೆ; ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ತಲಾ 1 ಲಕ್ಷ ಬಹುಮಾನ ನೀಡುತ್ತೇನೆಂದು ಶಾಸಕ ಬಸವರಾಜು ವಿ. ಶಿವಗಂಗಾ ಹೇಳಿದರು.
ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕೆರೆಬಿಳಚಿ ಗ್ರಾಮಾಂತರ ಪ್ರೌಢಶಾಲೆ ಹಾಗೂ ಸರ್ಕಾರಿ ಉರ್ದು ಪ್ರೌಢಶಾಲೆಗೆ ಭೇಟಿ ನೀಡಿ ಮಾತನಾಡಿದರು. ಶೇ 95ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಪ್ರವೇಶ ಕೊಡಿಸುತ್ತೇನೆ ಎಂದರು.ಈ ಸಂದರ್ಭದಲ್ಲಿಡಿಡಿಪಿಐ ಕೊಟ್ರೇಶ್, ಬಿಇಒ ಎಲ್. ಜಯಪ್ಪ, ಪ್ರೌಢಶಾಲೆಗಳ ಶಿಕ್ಷಕರು, ಗ್ರಾಮಸ್ಥರು ಇದ್ದರು.



