Connect with us

Dvgsuddi Kannada | online news portal | Kannada news online

ಸಂಧ್ಯಾಸುರಕ್ಷಾ, ವೃದ್ಧಾಪ್ಯ, ವಿಧವಾ ವೇತನ ಕೇಳಲು ಬರುವವರಿಗೆ ಅಂಚೆ ಇಲಾಖೆ ಅಧಿಕಾರಿಗಳು ಸೌಜನ್ಯದಿಂದ ಮಾತನಾಡಿಸಿ, ನಿಖರ ಮಾಹಿತಿ ನೀಡಿ; ಡಿಸಿ ಸೂಚನೆ

IMG 20240305 120135 1

ದಾವಣಗೆರೆ

ಸಂಧ್ಯಾಸುರಕ್ಷಾ, ವೃದ್ಧಾಪ್ಯ, ವಿಧವಾ ವೇತನ ಕೇಳಲು ಬರುವವರಿಗೆ ಅಂಚೆ ಇಲಾಖೆ ಅಧಿಕಾರಿಗಳು ಸೌಜನ್ಯದಿಂದ ಮಾತನಾಡಿಸಿ, ನಿಖರ ಮಾಹಿತಿ ನೀಡಿ; ಡಿಸಿ ಸೂಚನೆ

ದಾವಣಗೆರೆ: ಸಾಮಾಜಿಕ ಭದ್ರತಾ ಯೋಜನೆಗಳಾದ ಸಂಧ್ಯಾಸುರಕ್ಷಾ, ವೃದ್ದಾಪ್ಯ, ವಿಧವಾ, ಅಂಗವಿಕಲರ ಮಾಸಾಶನ ಸೇರಿದಂತೆ ಇನ್ನಿತರೆ ಮಾಸಾಶನಗಳನ್ನು ವಯೋವೃದ್ದರು ಕೇಳಲು ಬಂದಾಗ ಅಂಚೆ ಇಲಾಖೆ ಅಧಿಕಾರಿಗಳು ಸೌಜನ್ಯದಿಂದ ವರ್ತಿಸಿ, ನಿಖರ ಮಾಹಿತಿ ನೀಡಬೇಕು ಎಂಧು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಅಂಚೆ ಇಲಾಖೆ ಅಧಿಕಾರಿಗಳು ಹಾಗೂ ಸಾಮಾಜಿಕ ಭದ್ರತಾ ಯೋಜನೆ ಅನುಷ್ಟಾನಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಪ್ರತಿ ತಿಂಗಳು ಸಾಮಾಜಿಕ ಭದ್ರತಾ ಯೋಜನೆ ಮಾಸಾಶನ ಸಕಾಲದಲ್ಲಿ ತಲುಪದ ಕಾರಣ ವಯೋವೃದ್ದರಿಗೆ ಜೀವನ ನಿರ್ವಹಣೆ ಹಾಗೂ ದಿನನಿತ್ಯದ ಖರ್ಚುವೆಚ್ಚಗಳಿಗೆ ಸಮಸ್ಯೆಯಾಗಿದೆ ಎಂದು ಹಲವು ಮಾಸಾಶನ ಫಲಾನುಭವಿಗಳು ದೂರು ನೀಡಿದ್ದರು.ಅಂಚೆ ಇಲಾಖೆಯಿಂದ ಮಾಸಾಶನಗಳು ಸಕಾಲದಲ್ಲಿ ವಿತರಣೆಯಾಗಿದೆಯೇ ಇಲ್ಲವೋ ಎಂಬ ಬಗ್ಗೆ ಪರಿಶೀಲನೆ ನಡೆಸಬೇಕು.

ಮಾಸಾಶನದ ಮಾಹಿತಿ ಕೇಳಲು ಬರುವವರಿಗೆ ಅಂಚೆ ಕಚೇರಿಯಲ್ಲಿ ಸೌಜನ್ಯತೆಯಿಂದ ವರ್ತನೆ ಮಾಡುವ ಜೊತೆಗೆ ಅವರ ಖಾತೆಯಲ್ಲಿ ಹಣ ಜಮಾ ಆಗಿರುವ ಬಗ್ಗೆ ನಿಖರ ಮಾಹಿತಿಯನ್ನು ನೀಡಬೇಕು. ಕೆಲವೊಂದು ವೇಳೆ ಅಂಚೆ ಇಲಾಖೆ ನೌಕರರು ವಿತರಣೆಯ ವೇಳೆ ವಿಳಂಬ ಮಾಡುವ ಸಂಭವವಿದ್ದು ಇದನ್ನು ಪೋಸ್ಟ್ ಮಾಸ್ಟರ್ ಪ್ರತಿನಿತ್ಯ ಪರಿಶೀಲನೆ ಮಾಡಿಕೊಳ್ಳಬೇಕೆಂದು ತಿಳಿಸಿ ಮುಂದಿನ ದಿನಗಳಲ್ಲಿ ಸರ್ಕಾರದಿಂದ ಜಮಾ ಮಾಡಿದ್ದರೂ ಮಾಸಾಶನ ತಲುಪದಿದ್ದಲ್ಲಿ ಅಂತಹ ಸಿಬ್ಬಂದಿಯ ಮೇಲೆ ಶಿಸ್ತುಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದರು.

ಮಾಸಾಶನ ಪಾವತಿಯ ಹಂತಗಳು; ಅಂಚೆ ಮೂಲಕ ಪಡೆಯುತ್ತಿರುವ ಸಾಮಾಜಿಕ ಭದ್ರತಾ ಮಾಸಾಶನವು ಆಧಾರ್ ಬೇಸ್ಡ್ ಡಿಬಿಟಿ ಮೂಲಕ ನೇರವಾಗಿ ಅವರ ಖಾತೆಗೆ ಜಮಾ ಮಾಡಲಾಗುತ್ತದೆ. ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಮತ್ತು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಖಾತೆ ಇರುತ್ತದೆ. ಅಂಚೆ ಎಸ್.ಬಿ.ಖಾತೆಯಿಂದ ಮಾಸಾಶನ ಪಾವತಿಗೆ ಅವರ ಮನೆ ಬಾಗಿಲಲ್ಲಿ ಪಾವತಿಸಲು ಹಿಂಪಡೆಯುವ ನಮೂನೆಗೆ ಸಹಿ ಮತ್ತು ಇದಕ್ಕೆ ಗೆಜಿಟೆಡ್ ಅಧಿಕಾರಿಗಳ ಸಹಿ, ಸಾಕ್ಷಿಗಳ ಸಹಿ ಪಡೆದು ಮನೆ ಬಾಗಿಲಲ್ಲಿ ವಿತರಣೆ ಮಾಡಲಾಗುತ್ತದೆ. ಮತ್ತು ಇಂಡಿಯಾ ಪೋಸ್ಟ್ ಪೇಮೆಂಟ್ ವ್ಯವಸ್ಥೆಯಡಿ ಅಂಚೆ ಕಚೇರಿಯಲ್ಲಿ ಹಾಗೂ ಮನೆ ಬಾಗಿಲಲ್ಲಿ ಬಯೋಮೆಟ್ರಿಕ್ ಮೂಲಕ ಅಂಚೆಯಣ್ಣ ಪಾವತಿಸುವರು. ಮಾಸಾಶನ ಸರ್ಕಾರದಿಂದ ಅವರ ಖಾತೆಗೆ ಜಮೆಯಾದ ಬಗ್ಗೆ ಅವರು ನೀಡಿರುವ ಮೊಬೈಲ್‍ಗೆ ಮೆಸೇಜ್ ಹೋಗುತ್ತದೆ.

ಫಲಾನುಭವಿಗಳು ಬಯೋಮೆಟ್ರಿಕ್ ನೀಡುವಾಗ ಮತ್ತು ವಿತ್‍ಡ್ರಾ ನಮೂನೆಗೆ ಸಹಿ ಮಾಡುವಾಗ ಖಾತರಿ ಮಾಡಿಕೊಳ್ಳಬೇಕಾಗುತ್ತದೆ.
ಸಭೆಯಲ್ಲಿ ಅಂಚೆ ಅಧೀಕ್ಷಕರಾದ ಚಂದ್ರಶೇಖರ್, ಸಾಮಾಜಿಕ ಭದ್ರತಾ ಯೋಜನೆ ಸಹಾಯಕ ನಿರ್ದೇಶಕರಾದ ಪುಷ್ಪಾ ಹಾಗೂ ಅಂಚೆ ಇಲಾಖೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top