ದಾವಣಗೆರೆ: ರೈಲ್ವೆ ನಿಲ್ದಾಣದಲ್ಲಿ ಒಂದು ನಿಲ್ದಾಣ ಒಂದು ಉತ್ಪನ್ನ; ಆತ್ಯಾಧುನಿಕ ಮೂಲಭೂತ ಸೌಕರ್ಯ ಅಭಿವೃದ್ದಿಗೆ ಆದ್ಯತೆ; ಸಂಸದ ಜಿ.ಎಂ.ಸಿದ್ದೇಶ್ವರ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ, ಅತ್ಯಾಧುನಿಕ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಮಹತ್ತರ ಪ್ರಯತ್ನವು ದೇಶಾದ್ಯಂತ ನಡೆಯುತ್ತಿದ್ದು ರಾಷ್ಟ್ರದ ಇತಿಹಾಸದಲ್ಲಿ ಮಹತ್ವದ ಮೈಲುಗಲ್ಲಾಗಿದೆ ಎಂದು ಸಂಸದರಾದ ಜಿ.ಎಂ.ಸಿದ್ದೇಶ್ವರ್ ತಿಳಿಸಿದರು.

ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ನೆಡೆದ ಒಂದು ನಿಲ್ದಾಣ ಒಂದು ಉತ್ಪನ್ನ ನವೀಕರಣ ಫಲಕದ ಉದ್ಘಾಟನೆಯನ್ನು ಲೋಕಸಭಾ ಸಂಸದರಾದ ಜಿ.ಎಂ.ಸಿದ್ದೇಶ್ವರ ನೇರವೆರಿಸಿ ಮಾತನಾಡಿದರು. ಇಂದು ಭಾರತೀಯ ರೈಲ್ವೆಗೆ ಸಂಬಂಧಿಸಿದ 6000 ಕ್ಕೂ ಹೆಚ್ಚು ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ದೇಶಾದ್ಯಂತ ನೆರವೇರಿಸಲಾಗುತ್ತಿದೆ. ಇದರ ಮೌಲ್ಯ 85,000 ಕೋಟಿ ರೂ.ಗಳಿಗಿಂತಲೂ ಹೆಚ್ಚಿದೆ. ಇದು ನಮ್ಮ ರಾಷ್ಟ್ರದ ಬೆಳವಣಿಗೆಯ ಭವಿಷ್ಯದ ಭರವಸೆಯ ಚಿತ್ರಣವನ್ನು ಮೂಡಿಸಿದೆ.

ಕೇಂದ್ರ ಸರ್ಕಾರದ ಈ ಅವಧಿಯಲ್ಲಿ ಭಾರತೀಯ ರೈಲ್ವೆ ಪುನರುಜ್ಜಿವನದ ಸುವರ್ಣ ಯುಗವನ್ನು ಕಾಣುತ್ತಿದೆ. ಕಳೆದ ದಶಕದಲ್ಲಿ ಪ್ರಧಾನಮಂತ್ರಿಯವರ ಅಚಲ ಪ್ರಯತ್ನಗಳು ಮತ್ತು ಮೂಲಸೌಕರ್ಯಗಳ ಅಭಿವೃದ್ಧಿಗೆ ಅವರ ದೃಢವಾದ ಗಮನದ ಮೂಲಕ, ಭಾರತವು ಈಗ ವಿಶ್ವದಲ್ಲೇ ವೇಗವಾಗಿ ಬೆಳೆಯುತ್ತಿರುವ ರೈಲು ಜಾಲ ವ್ಯವಸ್ಥೆಯನ್ನು ಹೊಂದಿದೆ. ಹಾಗೂ ಈಗಾಗಲೇ ವಂದೇ ಭಾರತ್ ರೈಲುಗಳು ಈಗ ರಾಜ್ಯದೊಳಗೆ ಕಾರ್ಯನಿರ್ವಹಿಸುತ್ತಿವೆ ಮತ್ತು ಕರ್ನಾಟಕದ ರೈಲ್ವೆ ನಿಲ್ದಾಣಗಳನ್ನು ಪುನರುಜ್ಜಿವನಗೊಳಿಸುವ ಅಭಿಯಾನದ ಭಾಗವಾಗಿ 44 ಕ್ಕೂ ಹೆಚ್ಚು ನಿಲ್ದಾಣಗಳ ಪುನರಾಭಿವೃದ್ಧಿ ಕಾರ್ಯ ಪ್ರಗತಿಯಲ್ಲಿದೆ ಎಂದರು.

ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ವಂದೇ ಭಾರತ್ ರೈಲುಗಳು ದೇಶದ ಉದ್ದಗಲಕ್ಕೂ ಸಂಚರಿಸುತ್ತವೆ. ಕಳೆದ ದಶಕದಲ್ಲಿ ದೇಶಾದ್ಯಂತ 30,000 ಕಿಲೋಮೀಟರ್ ಗಿಂತ ಹೆಚ್ಚು ಹೊಸ ರೈಲ್ವೆ ಮಾರ್ಗಗಳು, ಗೇಜ್ ಪರಿವರ್ತನೆ ಮತ್ತು ರೈಲ್ವೆ ಮಾರ್ಗಗಳ ದ್ವಿಪಥ ಅಭಿವೃದ್ದಿಯನ್ನು ಕೈಗೊಳ್ಳಲಾಗಿದೆ. ಭಾರತೀಯ ರೈಲ್ವೆ ‘ಭಾರತ್ ಗೌರವ್’ ನಂತಹ ಥೀಮ್ ಆಧಾರಿತ ಪ್ರವಾಸಿ ರೈಲುಗಳ ಮೂಲಕ ಭಾರತದ ಶ್ರೀಮಂತ ಸಾಂಸ್ಕøತಿಕ ಪರಂಪರೆ ಮತ್ತು ಭವ್ಯವಾದ ಐತಿಹಾಸಿಕ ತಾಣಗಳನ್ನು ಹೆಮ್ಮೆಯಿಂದ ಪ್ರದರ್ಶಿಸುತ್ತಿದೆ. ಹಾಗೂ ದೇಶಾದ್ಯಂತ ರೈಲ್ವೆ ನಿಲ್ದಾಣಗಳಲ್ಲಿ “ಒಂದು ನಿಲ್ದಾಣ ಒಂದು ಉತ್ಪನ್ನ” (ಒಎಸ್‍ಪಿ) ಮಳಿಗೆಗಳನ್ನು ಸ್ಥಾಪಿಸುವ ಮೂಲಕ, ಭಾರತೀಯ ರೈಲ್ವೆ ಪ್ರಧಾನ ಮಂತ್ರಿಯವರ ‘ವೋಕಲ್ ಫಾರ್ ಲೋಕಲ್’ ಅಭಿಯಾನವನ್ನು ಸಕ್ರಿಯವಾಗಿ ಉತ್ತೇಜಿಸುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಹರಿಹರ ಶಾಸಕ ಬಿ.ಪಿ.ಹರೀಶ್, ಹರಿಹರ ನಾಗರಿಕ ಸಲಹಾ ಸಮಿತಿ ಸದಸ್ಯರಾದ ಸಾವಿತ್ರಮ್ಮ,
ರೈಲ್ವೆ ಅಧಿಕಾರಿಗಳಾದ ಉಮೇಶ್ ನಾಯ್ಕ್, ಮುಖಂಡರಾದ ಯಶವಂತ ಜಾಧವ್, ಗಾಯಿತ್ರಿ ಸಿದ್ದೇಶ್ವರ, ಯಶೋಧ ವೆಂಕಪ್ಪ, ಪ್ರಶಾಂತ ಕುಮಾರ್, ಜಿ.ಎಸ್.ಶ್ಯಾಮ್ ಇನ್ನಿತರರು ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *