ದಾವಣಗೆರೆ: ಪಾನಿಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥಗೊಂಡ ಘಟನೆ ಹರಿಹರ ತಾಲೂಕಿನ ಮಲೇಬೆನ್ನೂರು ಪಟ್ಟಣದಲ್ಲಿ ನಡೆದಿದೆ.
ಮಲೇಬೆನ್ನೂರಿನ ಜಾಮಿಯಾ ಮಸೀದಿ ಬಳಿ ಉಪವಾಸ ಅಂತ್ಯ ಮಾಡಿದ ನಂತರ ಮಸೀದಿ ಮುಂಭಾಗ ಪಾನಿ ಪೂರಿ ಸೇವಿಸಿದ 19 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ತಕ್ಷಣವೇ ಸರ್ಕಾರಿ ಆಸ್ಪತ್ರೆ ಗೆ ದಾಖಲಾಗಿದೆ. ಅದರಲ್ಲಿ ನಾಲ್ಕು ಮಕ್ಕಳ ಸ್ಥಿತಿ ಗಂಭೀರವಾಗಿದ್ದು, ದಾವಣಗೆರೆ ಬಾಪೂಜಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ.



