Connect with us

Dvgsuddi Kannada | online news portal | Kannada news online

ದಾವಣಗೆರೆ; ಎರಡು ದಿನ ಪಶುಸಂಗೋಪನಾ ಚಟುಚವಟಿಕೆ ತರಬೇತಿ

ದಾವಣಗೆರೆ

ದಾವಣಗೆರೆ; ಎರಡು ದಿನ ಪಶುಸಂಗೋಪನಾ ಚಟುಚವಟಿಕೆ ತರಬೇತಿ

ದಾವಣಗೆರೆ: ಪಶುಪಾಲನಾ ಮತ್ತು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ನಗರದ ಪಿ.ಬಿ. ರಸ್ತೆ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿ ರೈತರಿಗೆ ಪಶುಸಂಗೋಪನಾ ಚಟುವಟಿಕೆಗಳ ತರಬೇತಿಯನ್ನು ಏಪ್ರಿಲ್ 3 ಮತ್ತು 4 ರಂದು ಆಯೋಜಿಸಲಾಗಿದೆ. ತರಬೇತಿಯ ಅವಧಿಯಲ್ಲಿ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, ಪಾಸ್ ಪೋರ್ಟ್ ಸೈಜ್ 2 ಫೋಟೋ, ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರ ಜೆರಾಕ್ಸ ತರಬೇಕು. ಹೆಚ್ಚಿನ ವಿವರಕ್ಕಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ದೂ.ಸಂ.08192-233787 ಗೆ ಸಂರ್ಪಕಿಸಲು ಪಶುಪಾಲನಾ ಮತ್ತು ಪಶುವೈದ್ಯಕೀಯ ಮುಖ್ಯ ಪಶುವೈದ್ಯಾಧಿಕಾರಿಗಳು ಈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top