Connect with us

Dvgsuddi Kannada | online news portal | Kannada news online

ದಾವಣಗೆರೆ: ಗ್ರಾಹಕರಿಂದ ಪೇಪರ್ ಬ್ಯಾಗ್‍ ಗೆ ಹೆಚ್ಚುವರಿ 10 ರೂ.ಪಡೆದ ಶಾಪಿಂಗ್ ಮಾಲ್‍ಗೆ ಬಿತ್ತು 7 ಸಾವಿರ ದಂಡ..!!!

images 2024 04 06T063410.050

ದಾವಣಗೆರೆ

ದಾವಣಗೆರೆ: ಗ್ರಾಹಕರಿಂದ ಪೇಪರ್ ಬ್ಯಾಗ್‍ ಗೆ ಹೆಚ್ಚುವರಿ 10 ರೂ.ಪಡೆದ ಶಾಪಿಂಗ್ ಮಾಲ್‍ಗೆ ಬಿತ್ತು 7 ಸಾವಿರ ದಂಡ..!!!

ದಾವಣಗೆರೆ: ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ ಗೆ ರೂ.10 ಪಡೆದುಕೊಂಡು ಶಾಪಿಂಗ್ ಮಾಲ್‍ಗೆ 7 ಸಾವಿರ ದಂಡ ವಿಧಿಸಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ.

ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top