ದಾವಣಗೆರೆ: ಜಿಲ್ಲೆಯಲ್ಲಿ ಪ್ರಸ್ತುತ ಇರುವ ಹಾಗೂ ಹೊಸದಾಗಿ ಪ್ರಾರಂಭಿಸುವ ಕೈಗಾರಿಕೆ, ವಾಣಿಜ್ಯ, ಮೂಲ ಸೌಕರ್ಯ ಅಭಿವೃದ್ಧಿ, ಗಣಿಗಾರಿಕೆ, ಮನರಂಜನೆ ಯೋಜನೆಗಳಿಗೆ ಅಂತರ್ಜಲ ಬಳಕೆದಾರರು ಕಡ್ಡಾಯವಾಗಿ ನಿರಾಕ್ಷೇಪಣಾ ಪತ್ರ ಪಡೆಯಬೇಕು.
ಅಂತರ್ಜಲ ಬಳಕೆದಾರರು ಕರ್ನಾಟಕ ಅಂತರ್ಜಲ ಪ್ರಾಧಿಕಾರದಿಂದ ಕಡ್ಡಾಯವಾಗಿ ನಿರಾಕ್ಷೇಪಣಾ ಪತ್ರವನ್ನು (ಓಔಅ) ಪಡೆಯಬೇಕಾಗಿರುತ್ತದೆ. ಆದ್ದರಿಂದ ಸಂಬಂಧಪಟ್ಟ ಎಲ್ಲಾ ಅಂತರ್ಜಲ ಬಳಕೆದಾರರು ನಿರಾಕ್ಷೇಪಣಾ ಪತ್ರ ಪಡೆಯಲು https://kgwa.in/Public/ https://antharjala karnataka.gov.in ವೆಬ್ ಸೈಟ್ನಲ್ಲಿ ಸಲ್ಲಿಸಲು ಅವಕಾಶವಿರುತ್ತದೆ.
ಈ ಹಿನ್ನಲೆಯಲ್ಲಿ ದಾವಣಗೆರೆ ಜಿಲ್ಲೆಯದ್ಯಾದಂತ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಮತ್ತು ಹೊಸದಾಗಿ ಪ್ರಾರಂಭಿಸುವ ಕೈಗಾರಿಕೆ, ವಾಣಿಜ್ಯ, ಗಣಿಗಾರಿಕೆ, ಮನರಂಜನೆ ಮತ್ತು ಮೂಲಭೂತ ಸೌಕರ್ಯ ಉದ್ದೇಶಕ್ಕಾಗಿ ಅಂತರ್ಜಲವನ್ನು ಬಳಸುವವರು ಕಡ್ಡಾಯವಾಗಿ ನಿರಾಕ್ಷೇಪಣಾ ಪತ್ರವನ್ನು ಪಡೆಯಬೇಕು ಎಂದು ಕ.ರಾ.ಮಾ.ನಿ ಮಂಡಳಿ ಪರಿಸರ ಅಧಿಕಾರಿ ಲಕ್ಷ್ಮಿಕಾಂತ್ ತಿಳಿಸಿದ್ದಾರೆ.



