ದಾವಣಗೆರೆ: ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಹಾಗೂ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ ಪ್ರಸಕ್ತ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆಯನ್ನು ಈಗಾಗಲೇ ನಡೆಸಲಾಗಿದೆ. ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಸತಿ ಶಾಲೆ ಆಯ್ಕೆಗೆ ಜೂ.6ರಂದು ಕೌನ್ಸಿಲಿಂಗ್ ನಡೆಯಲಿದೆ
ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ಜಿಲ್ಲಾ ಅಧಿಕಾರಿಗಳು,ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ನಂ.44, ಎಬ್ಲಾಕ್, 2ನೇ ಮಹಡಿ, ಜಿಲ್ಲಾಡಳಿತ ಭವನ,
ಕರೂರು ಕ್ರಾಸ್, ಹರಿಹರ ರಸ್ತೆ, ದಾವಣಗೆರೆ ಇಲ್ಲಿ ಪ್ರಕಟಿಸಲಾಗಿದೆ.ಅಲ್ಪಸಂಖ್ಯಾತ ವರ್ಗದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ,ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗದ ಆಯ್ಕೆಯಾದ ವಿದ್ಯಾರ್ಥಿಗಳು ಜೂ.6ರಂದು ಬೆಳಗ್ಗೆ 10.30 ರಿಂದ ಸಂಜೆ 5 ಗಂಟೆವರೆಗೆ ಕೌನ್ಸಿಲಿಂಗ್ ನಲ್ಲಿ ಭಾಗವಹಿಸಬೇಕು. ನಿಗದಿತ ದಿನಾಂಕಗಳಂದು ಕೌನ್ಸಿಲಿಂಗ್‌ನಲ್ಲಿ ಭಾಗವಹಿಸದೇ ಇರುವ ವಿದ್ಯಾರ್ಥಿಗಳ ಪ್ರವೇಶಾತಿಗೆ ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ. 08192-250022 ಇಲ್ಲಿಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಅಧಿಕಾರಿ ಮಲ್ಲಿಕಾರ್ಜುನ್ ಮಠದ್ ತಿಳಿಸಿದ್ದಾರೆ.



