ದಾವಣಗೆರೆ: ಪ್ರಸಕ್ತ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಚನ್ನಗಿರಿ ತಾಲ್ಲೂಕಿನ ವ್ಯಾಪ್ತಿಯಲ್ಲಿರುವ ಮೆಟ್ರಿಕ್ ಪೂರ್ವ, ನಂತರದ ಬಾಲಕರ, ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
5 ರಿಂದ 10 ತರಗತಿಯವರೆಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳು ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಮೆಟ್ರಿಕ್ ನಂತರದ ವಿವಿಧ ಕೋರ್ಸುಗಳಿಗೆ ಪ.ಜಾತಿ, ಪ.ವರ್ಗ ಹಾಗೂ ಇತರೆ ವರ್ಗದ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಪ್ರತಿಯೊಂದಿಗೆ ಜಾತಿ, ಆದಾಯ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ಹಿಂದಿನ ತರಗತಿಯಲ್ಲಿ ಪಾಸಾದ ಅಂಕಪಟ್ಟಿಯ ಪ್ರತಿ, ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿಗಳ ದೃಢೀಕೃತದೊಂದಿಗೆ ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಸಂಬಂಧಿಸಿದ ವಾರ್ಡನ್ ರವರಿಗೆ ಸಲ್ಲಿಸಬೇಕು. ವೆಬ್‍ಸೈಟ್ ವಿಳಾಸ: https://swdservices.karnataka.gov.in/swdhmis/ ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-295031, 9480843117 ಸಂಪರ್ಕಿಸಲು ಚನ್ನಗಿರಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.



