Connect with us

Dvgsuddi Kannada | online news portal | Kannada news online

ದಾವಣಗೆರೆ: OBC ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ  ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: OBC ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ  ಅರ್ಜಿ ಆಹ್ವಾನ

ದಾವಣಗೆರೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ, ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರವರ್ಗ-1, ಎಸ್.ಸಿ. & ಎಸ್.ಟಿ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ರೂ.2.50 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ರೂ.1.00 ಲಕ್ಷ ಮಿತಿಯೊಳಗಿರಬೇಕು. ಅರ್ಜಿ ಸಲ್ಲಿಸಲು ನ.20 ಕೊನೆಯ ದಿನವಾಗಿದ್ದು, ಅರ್ಜಿಯನ್ನು ಆನ್‍ಲೈನ್ ನಲ್ಲಿ ವೆಬ್‍ಸೈಟ್: www.bcwd.karnataka.gov.in ಮೂಲಕ ಸಲ್ಲಿಸಬೇಕು.

ವಿದ್ಯಾರ್ಥಿಗಳು ಸಲ್ಲಿಸುವ ಅರ್ಜಿಯನ್ನು ವಿದ್ಯಾರ್ಥಿಯು ವ್ಯಾಸಂಗ ಮಾಡುತ್ತಿರುವ ಕಾಲೇಜಿನ ಪ್ರಾಂಶುಪಾಲರಿಂದ ದೃಢೀಕರಿಸಿ, ದಾಖಲೆಗಳೊಂದಿಗೆ ಸಂಬಂಧಪಟ್ಟ ತಾಲ್ಲೂಕು ಹಿಂದುಳಿದ ವರ್ಗಗಳ ಕಛೇರಿಗೆ ನ.23 ರ ಒಳಾಗಾಗಿ ಸಲ್ಲಿಸಬೇಕು. ಸಮಿತಿಯು ನ.24 ರಿಂದ ನ.30 ರ ನಡುವೆ ಹೊಸ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಿದೆ. ಡಿ.02 ರಂದು ಆಯ್ಕೆ ಸಮಿತಿಯ ಪಟ್ಟಿಯನ್ನು ಪ್ರಕಟಿಸಲಾಗುವುದು. ವಿದ್ಯಾರ್ಥಿಗಳು ಡಿ.2 ರಿಂದ 10 ರ ಒಳಗೆ ವಿದ್ಯಾರ್ಥಿನಿಲಯಕ್ಕೆ ಪ್ರವೇಶ ಪಡೆಯಬೇಕು. ಹಾಗೂ ಡಿ.3 ರಂದು ಪ್ರವೇಶಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು.

ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ಮೇಲೆ ತಿಳಿಸಿದ ವೆಬ್‍ಸೈಟ್ ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@karnataka.gov.in ಗೆ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ ಅಥವಾ ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಂಪರ್ಕಿಸಬಹುದಾದ ಸಹಾಯವಾಣಿ ಸಂಖ್ಯೆ 080-8050370006 ಅನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top