Connect with us

Dvgsuddi Kannada | online news portal | Kannada news online

ದಾವಣಗೆರೆ: ಮಹಿಳೆಯರಿಗೆ ಉಚಿತ ಫ್ಯಾಶನ್ ಡಿಸೈನಿಂಗ್, ಟೈಲರಿಂಗ್ ತರಬೇತಿ

images 2024 01 08T195731.194

ದಾವಣಗೆರೆ

ದಾವಣಗೆರೆ: ಮಹಿಳೆಯರಿಗೆ ಉಚಿತ ಫ್ಯಾಶನ್ ಡಿಸೈನಿಂಗ್, ಟೈಲರಿಂಗ್ ತರಬೇತಿ

ದಾವಣಗೆರೆ: ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫ್ಯಾಶನ್ ಡಿಸೈನಿಂಗ್ ಹಾಗೂ ಟೈಲರಿಂಗ್ ಕುರಿತ 30 ದಿನಗಳ ಉಚಿತ ತರಬೇತಿ ಆಗಸ್ಟ್ 1 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರು ತರಬೇತಿಗೆ ಅರ್ಜಿ ಸಲ್ಲಿಸಬಹುದು.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಆಧಾರ್ ಕಾರ್ಡ್ ಹಾಗೂ ನರೇಗಾ ಯೋಜನೆಯ ಜಾಬ್ ಕಾರ್ಡ್ ಅಥವಾ ಬಿಪಿಎಲ್ ಕಾರ್ಡ್‍ನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಜುಲೈ 23 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‍ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top