ದಾವಣಗೆರೆ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯಿಂದ ಆಗಸ್ಟ್ 28 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಹಳೇ ಕುಂದುವಾಡ ರಸ್ತೆ, ಬಂಟರ ಭವನದಲ್ಲಿ ನೂತನವಾಗಿ ಚುನಾಯಿತರಾದ ಲೋಕಸಭಾ ಸದಸ್ಯರಿಗೆ ಹಾಗೂ ವಿಧಾನಪರಿಷತ್ ಸದಸ್ಯರುಗಳಿಗೆ ಸನ್ಮಾನ ಸಮಾರಂಭ, ಹಾಗೂ 2023-24 ನೇ ಸಾಲಿನ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಹಾಗೂ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ದಾವಣಗೆರೆ ದಕ್ಷಿಣ ವಿಧಾನಸಭಾ ಸದಸ್ಯ ಡಾ.ಶಾಮನೂರು ಶಿವಶಂಕರಪ್ಪ ಉದ್ಘಾಟಿಸುವರು. ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ , ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡುವರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ವೀರೇಶ ಎಸ್.ಒಡೇನಪುರ ಅಧ್ಯಕ್ಷತೆ ವಹಿಸುವರು.
ಸಂಸದ ಡಾ.ಪ್ರಭಾ ಮಲ್ಲಿಕಾರ್ಜುನ್, ವಿಧಾನಪರಿಷತ್ ಶಾಸಕರಾದ ಡಿ.ಟಿ.ಶ್ರೀನಿವಾಸ್, ಎಸ್.ಎಲ್ ಭೋಜೆಗೌಡ, ಡಾ.ಧನಂಜಯ ಸರ್ಜಿ ಇವರಿಂದ ನೂತನ ಜನಪ್ರತಿನಿಧಿಗಳಿಗೆ ಗೌರವಿಸಿ ಸನ್ಮಾನಿಸುವರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವರು.
ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಹರಿಹರ ಶಾಸಕ ಬಿ.ಪಿ ಹರೀಶ್ ಉಪಸ್ಥಿತರಿರುವರು. ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ. ಇಟ್ನಾಳ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಭಾಗವಹಿಸುವರು.
ಮುಖ್ಯ ಅತಿಥಿಗಳಾಗಿ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ತಿಮ್ಮೇಗೌಡ, ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಬಿ.ಬಳ್ಳಾರಿ, ರಾಜ್ಯ ಖಜಾಂಚಿ ಡಾ.ಎಸ್.ಸಿದ್ದರಾಮಣ್ಣ, ಗೌರವಾಧ್ಯಕ್ಷರಾದ ಬಿ.ಹೆಚ್.ವೆಂಕಟೇಶಯ್ಯ, ಹಿರಿಯ ಉಪಾಧ್ಯಕ್ಷರಾದ ಎಂ.ವಿ.ರುದ್ರಪ್ಪ, ಎಸ್ ಬಸವರಾಜು, ಆರ್.ಮೋಹನ್ ಕುಮಾರ್, ಎಸ್.ಸಿದ್ದೇಶ್ವರ, ಡಾ.ನೆಲ್ಕುದ್ರಿ ಸದಾನಂದಪ್ಪ ಪಾಲ್ಗೊಳ್ಳುವರು.



