ದಾವಣಗೆರೆ: ನಗರದ ಜಿಎಂ ಫಾರ್ಮಸಿ ಕಾಲೇಜಿನಲ್ಲಿ ಇತ್ತೀಚೆಗ ನಡೆದ ಒಮೆಗಾ ಹೆಲ್ತ್ ಕೇರ್ ಕಂಪನಿಯ ಕ್ಯಾಂಪಸ್ ಸಂದರ್ಶನ ಪ್ರಕ್ರಿಯೆಯಲ್ಲಿ ಬಿ ಫಾರ್ಮಸಿ ಓದುತ್ತಿರುವ ಅಂತಿಮ ವರ್ಷದ ವಿದ್ಯಾರ್ಥಿಗಳಲ್ಲಿ 12 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ ಗಿರೀಶ್ ಬೋಳಕಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫಾರ್ಮಸಿ ವಿದ್ಯಾರ್ಥಿಗಳಿಗೆ ಅನೇಕ ಕಂಪನಿ ಅವಕಾಶಗಳಿದ್ದು, ಡಿ ಫಾರ್ಮಸಿ ಮತ್ತು ಬಿ ಫಾರ್ಮಸಿ ವಿದ್ಯಾರ್ಥಿಗಳಿಗೆ ಕಂಪನಿಗಳಿಂದ ಭಾರಿ ಬೇಡಿಕೆ ಇದ್ದು, ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕ ತೇಜಸ್ವಿ ಕಟ್ಟಿಮನಿ ಟಿ ಆರ್ ತಿಳಿಸಿದರು.
ಇನ್ನೂ ಎರಡು ಕಂಪನಿಗಳ ಸಂದರ್ಶನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಇನ್ನೂ ಹೆಚ್ಚಿನ ವಿದ್ಯಾರ್ಥಿಗಳು ಕಂಪನಿಗಳಿಗೆ ಆಯ್ಕೆಯಾಗಲಿದ್ದಾರೆ ಎಂದು ತಿಳಿಸಿದರು. ಆಯ್ಕೆಯಾದ ಎಲ್ಲ ವಿದ್ಯಾರ್ಥಿಗಳಿಗೆ ಕಾಲೇಜಿನ ಚೇರ್ಮನ್ ಜಿಎಂ ಲಿಂಗರಾಜು, ಆಡಳಿತ ಅಧಿಕಾರಿ ವೈ ಯು ಸುಭಾಷ್ ಚಂದ್ರ, ಪ್ರಾಂಶುಪಾಲ ಡಾ ಗಿರೀಶ್ ಬೋಳಕಟ್ಟಿ, ಪ್ಲೇಸ್ಮೆಂಟ್ ವಿಭಾಗದ ಸಂಯೋಜಿತ ರಾಕೇಶ್, ಎಲ್ಲಾ ಅಧ್ಯಾಪಕ ವರ್ಗ ಅಭಿನಂದನೆ ತಿಳಿಸಿದ್ದಾರೆ.