ದಾವಣಗೆರೆ: ಶಾಲಾ ಸಾಕ್ಷರತಾ ಹಾಗೂ ಶಿಕ್ಷಣ ಇಲಾಖೆಯಿಂದ ವಿಕಲಚೇತನ ಮಕ್ಕಳ ವೈದ್ಯಕೀಯ ತಪಾಸಣೆ ಮತ್ತು ಸಾಧನ ಸಲಕರಣೆಗಳ ಮೌಲ್ಯಾಂಕನ ಶಿಬಿರವನ್ನು ಜಿಲ್ಲಾ ಮಟ್ಟದಲ್ಲಿ ನವೆಂಬರ್ 5 ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಶಿಬಿರಕ್ಕೆ ಹರಿಹರ, ತಾಲ್ಲೂಕು ವ್ಯಾಪ್ತಿಯ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 1 ರಿಂದ 10 ನೇ ತರಗತಿಯ ವಿಕಲಚೇತನ ಮಕ್ಕಳನ್ನು ಶಿಬಿರಕ್ಕೆ ಕರೆತಂದು ಸದರಿ ಶಿಬಿರದ ಸದುಪಯೋಗ ಪಡಿಸಿಕೊಳ್ಳುವಂತೆ ಸಾಕ್ಷರತಾ ಹಾಗೂ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಕೊಟ್ರೇಶ್ ತಿಳಿಸಿದ್ದಾರೆ.



