ದಾವಣಗೆರೆ: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಅವರು ನ.01 ರಂದು ಜಿಲ್ಲೆ ಆಗಮಿಸಲಿದ್ಧಾರೆ.
ನ.01 ರ ಬೆಳಿಗ್ಗೆ 10 ಗಂಟೆ ನಗರದ ಜಿಲ್ಲಾ ಕ್ರಿಡಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12.30ಕ್ಕೆ ನಗರದ ಗುಂಡಿ ಸರ್ಕಲ್‍ನಲ್ಲಿರುವ ಗುಂಡಿ ಮಹಾದೇವಪ್ಪ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ವ್ಹೇಟ್ ಲಿಫ್ಟಿಂಗ್ ಅಸೋಸಿಯೇಷನ್ ವತಿಯಿಂದ ಏರ್ಪಡಿಸಿರುವ ರಾಜ್ಯಮಟ್ಟದ ಹಿರಿಯರ ಮತ್ತು ಕಿರಿಯರ ಮಹಿಳೆ ಮತ್ತು ಪುರುಷರ ಹಾಗೂ ಬಾಲಕ ಬಾಲಕಿಯರ ವ್ಹೇಟ್ ಲಿಫ್ಟಿಂಗ್ ಸ್ಪರ್ಧೆಯ ಸಮಾರೋಪ ಸಮಾರಂಭ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಮಧ್ಯಾಹ್ನ 1 ಗಂಟೆಗೆ ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕುರ್ಕಿ ಗ್ರಾಮಕ್ಕೆ ಭೇಟಿ ನೀಡುವರು. ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.



