ದಾವಣಗೆರೆ: ಪ್ರಸಕ್ತ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರತಿಬಂಧ ಅಧಿನಿಯಮ ಮತ್ತು ನಿಯಮಗಳ ಬಗ್ಗೆ ಅರಿವು ಮೂಡಿಸಲು ನೋಂದಾಯಿತ ಸ್ವಯಂ ಸೇವಾ ಸಂಘ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಸೇವಾ ಸಂಸ್ಥೆಗಳು ಸಂಸ್ಥೆಯ ನೊಂದಣಿ ಪ್ರಮಾಣ ಪತ್ರ, ನವೀಕರಣ ಪ್ರಮಾಣ ಪತ್ರ, 3 ವರ್ಷದ ಅಡಿಟ್ ರಿಪೋರ್ಟ್, 5 ವರ್ಷ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ದಿಗಾಗಿ ಸೇವೆ ಸಲ್ಲಿಸಿರಬೇಕು. ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಿರುವ ದಾಖಲೆಗಳು, ಛಾಯಾಚಿತ್ರ, ಪತ್ರಿಕಾ ವರದಿಗಳೊಂದಿಗೆ ಅರ್ಜಿಯನ್ನು ನವಂಬರ್ 30 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು(ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ, ಹರಿಹರ ಇವರನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.



