ದಾವಣಗೆರೆ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದೆ. ಡಾಲರ್ ಬೆಲೆಯ ಏರಿಳಿ ಆರಿಕೆ ಆಗುತ್ತಿದೆ. ಇದರಿಂದ ತೈಲ ಬೆಲೆ ಹೆಚ್ಚಳವಾಗಿದೆ. ಮುಂದಿನ ದಿನಗಳಲ್ಲಿ ತೈಲ ಬೆಲೆ ಕಡಿಮೆ ಆಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾನಗಲ್, ಸಿಂದಗಿ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಮುಂದಿನ ಚುನಾವಣಾ ಫಲಿತಾಂಶದ ದಿಕ್ಸೂಚಿಯಲ್ಲ. ನಮಗೆ ಸಂಪೂರ್ಣ ಬಹುಮತ ಇದೆ. ಗೆದ್ದೇ ಗೆಲ್ಲುತ್ತೇವೆ. ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಸೋಲಲಿದೆ ಎಂದು ವಿಪಕ್ಷಗಳು ಹೇಳುತ್ತಿವೆ. ನಾಳೆ ಬೆಳಗ್ಗೆ ಎಲ್ಲವೂ ಗೊತ್ತಾಗಲಿದೆ ಎಂದರು.
ನನಗೆ ಈವರೆಗೂ ಬಿಟ್ ಕಾಯಿನ್ ಏನು ಎಂಬುದು ಗೊತ್ತೇ ಇಲ್ಲ. ಆ ಬಗ್ಗೆ ಮಾಹಿತಿಯೂ ಇಲ್ಲ. ಬಿಟ್ಕಾಯಿನ್ ಪ್ರಕರಣವನ್ನ ತನಿಖೆಗೆ ವಹಿಸುವುದಾಗಿ ಮುಖ್ಯಮಂತ್ರಿಯವರೇ ಹೇಳಿದ್ದಾರೆ ಎಂದು ತಿಳಿಸಿದರು.



