ದಾವಣಗೆರೆ: ಕಕ್ಕರಗೊಳ್ಳ ಗ್ರಾಮ ದೇವತೆ ನೂತನ ದೇವಸ್ಥಾನ ಲೋಕಾರ್ಪಣೆ, ಕಳಸಾರೋಹಣ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ತಾಲೂಕಿನ ಕಕ್ಕರಗೊಳ್ಳ ಗ್ರಾಮ ದೇವತೆ ಶ್ರೀ ಊರಮ್ಮ ದೇವಿ ನೂತನ ದೇವಸ್ಥಾನದ ಲೋಕಾರ್ಪಣೆ, ದೇವತೆಯ ನೂತನ ದೇವಸ್ಥಾನಕ್ಜೆ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಸಮಾರಂಭ ಏ.28ರಿಂದ 30ರವರೆಗೆ ಗ್ರಾಮದಲ್ಲಿ ನಡೆಯಲಿವೆ ಎಂದು ಗ್ರಾಮದ ಹಿರಿಯರಾದ ಕೆ.ಜಿ.ಬಸವನಗೌಡ್ರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಹಿತಿ‌ ನೀಡಿದ ಅವರು, 3.5 ಕೋಟಿ ವೆಚ್ಚದಲ್ಲಿ ಶ್ರೀ ದ್ಯಾಮಮ್ಮ ದೇವಿ ದೇವಸ್ಥಾನ ಲೋಕಾರ್ಪಣೆಗೊಳ್ಳಲಿದೆ. ಏ.28ರ ಮಧ್ಯಾಹ್ನ 3ಕ್ಕೆ ಶ್ರೀ ದೇವಿಯೊಂದಿಗೆ ಗ್ರಾಮ ದೇವರೊಂದಿಗೆ ಗಂಗಾಪೂಜೆ, ರಾತ್ರಿ 7.30ಕ್ಕೆ ಯಾಗ ಮಂಟಪದಿಂದ ದೇವಿಯ ಪ್ರವೇಶ ಕಾರ್ಯ ನಡೆಯಲಿದೆ ಎಂದರು.

ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ

ಏ.29ರ ಬೆಳಿಗ್ಗೆ 7ಕ್ಕೆ ನವಗ್ರಹ ಆರಾಧನೆ, ವಾಸ್ತುಪೂಜೆ, ದಿಕ್ಪಾಕರ ಪೂಜೆ, ಇತರೆ ಧಾರ್ಮಿಕ ನೆರವೇರಲಿದೆ. ಸಂಜೆ 4.30ರಿಂದ ಹೋಮ ಹವನ, ವಾಸ್ತು ಪೂಜೆ, ಗಣಹೋಮ, ಲಘು ಚಂಡಿಕಾ ಹೋಮ, ದುರ್ಗಾ ಹೋಮ, ಶ್ರೀ ಸೂಕ್ತ ಹೋಮ ಇತ್ಯಾದಿ ನಡೆಯಲಿದೆ. ರಾತ್ರಿ 9ಕ್ಕೆ ನಂತರ ಧಾರವಾಡ ಜಿಲ್ಲೆ ಕಲಘಟಗಿ ತಾ. ಬಸವನಕೊಪ್ಪದ ಶ್ರೀ ಬಸವೇಶ್ವರ ಭಜನಾ ತಂಡ, ಕಣವಿ ಹೊನ್ನಾಪುರದ ಹಾ.ಮಾ.ಮಹಾಂತೇಶ ಬ.ಹಡಪದ ತಂಡ, ಡಗ್ಗಾ ಮೈಲಾರಿ ಆಯಟ್ಟಿ ಶ್ರೀ ಮಾರುತಿ ಭಜನಾ ಸಂಘ, ಹಾ.ಮಾ. ಮಾರುತಿ ಕ. ಹಳಕಟ್ಟಿ ಡಗ್ಗಾ ಜಗದೀಶ ಹರ್ತಿ ತಂಡದಿಂದ ಭಜನೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.

ಸಂಸದರಿಂದ ಉದ್ಘಾಟನೆ

ಏ.30ರ ಬೆಳಗಿನ ಜಾವ 5.30ರಿಂದ 5.55ರವರೆಗೆ ಸಲ್ಲುವ ಬ್ರಾಹ್ಮೀ ಮುಹೂರ್ತದಲ್ಲಿ ಶ್ರೀ ದೇವಿಯ ಪ್ರಾಣ ಪ್ರತಿಷ್ಟಾಪನೆ ನಡೆಯಲಿದೆ . ಅಂದು ಬೆಳಿಗ್ಗೆ 11 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಉದ್ಘಾಟನೆಯನ್ನು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ನೆರವೇರಿಸಲಿದ್ದಾರೆ. ಮಾಜಿ ಸಚಿವ ಡಾ. ಶಾಮನೂರು ಶಿವಶಂಕರಪ್ಪ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ್, ರವೀಂದ್ರನಾಥ್, ಶಾಸಕರುಗಳಾದ ಕೆ.ಎಸ್. ಬಸವಂತಪ್ಪ, ಡಿ.ಜಿ.
ಶಾಂತನಗೌಡ, ಲತಾ ಮಲ್ಲಿಕಾರ್ಜುನ, ಬಿ.ಪಿ. ಹರೀಶ್, ಬಸವರಾಜ ವಿ. ಶಿವಗಂಗ, ಬಿ. ದೇವೇಂದ್ರಪ್ಪಭಾಗವಹಿಸಲಿದ್ದಾರೆ ಎಂದರು.

ದಾವಣಗೆರೆ ವಿಶ್ವವಿದ್ಯಾಲಯ ಉಪಕುಲಪತಿ ಪ್ರೊ.ಬಿ.ಡಿ. ಕುಂಬಾರ, ಕರ್ನಾಟಕ ಸಾಹಿತ್ಯ ಪರಿಷತ್ತು ಸಂಸ್ಥಾಪಕ ಅಧ್ಯಕ್ಷ ಪ್ರೊ.ಸಿ.ವೀರಣ್ಣ, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎಲ್.ಎನ್. ಮುಕುಂದರಾಜ್, ವಿಶ್ರಾಂತ ಕುಲಪತಿ ಪ್ರೊ.ಕೆ.ಸಿದ್ದಪ್ಪ, ಮಾಜಿ ಮಹಾಪೌರ ಕೆ.ಚಮನ್ ಸಾಬ್, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ, ಜಿಪಂ ಸಿಇಓ ಡಾ. ಸುರೇಶ್ ಬಿ. ಇಟ್ನಾಳ್, ಎಸ್ಪಿ ಉಮಾ ಪ್ರಶಾಂತ ಉಪಸ್ಥಿತರಿರಲಿದ್ದಾರೆ ಎಂದರು.

ಮೇ.1ರಂದು ಬಸವ ಜಯಂತಿ, ಶರಣ ಸಮ್ಮೇಳನ

ಕರ್ನಾಟಕದ ಸಾಂಸ್ಕೃತಿಕ ನಾಯಕ, ವಿಶ್ವ ಗುರು ಜಗಜ್ಯೋತಿ ಶ್ರೀ ಬಸವಣ್ಣನವರ ಜಯಂತಿ ಹಾಗೂ ಸರ್ವ ಶರಣ ಸಮ್ಮೇಳನ ಮೇ.1ರಂದು ತಾಲೂಕಿನ ಕಕ್ಕರಗೊಳ್ಳ ಗ್ರಾಮದಲ್ಲಿ ನಡೆಯಲಿದೆ.
ಅಂದು ಬೆಳಿಗ್ಗೆ 11ಕ್ಕೆ ಸಾಣೇಹಳ್ಳಿ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಹೊಸದುರ್ಗದ ಶ್ರೀ ಈಶ್ವರಾನಂದ ಪುರಿ ಸ್ವಾಮೀಜಿ, ನರಸೀಪುರದ ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ, ಚಿತ್ರದುರ್ಗದ ಶ್ರೀ ಮಡಿವಾಳ ಮಾಚಿದೇವ ಸ್ವಾಮೀಜಿ, ಬಸವ ಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಬಸವ ನಾಗಿದೇವ ಸ್ವಾಮೀಜಿ, ಮುಸ್ಲಿಂ ಧರ್ಮಗುರು ಇಬ್ರಾಹಿಂ ಸಖಾಫಿ ಸಾನ್ನಿಧ್ಯದಲ್ಲಿ ಗ್ರಾಮದ ಮುಖಂಡ ಕೆ.ಜಿ.ಬಸವನಗೌಡ್ರು ಅಧ್ಯಕ್ಷತೆಯಲ್ಲಿ ಸಮಾರಂಭ ನಡೆಯಲಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಗ್ರಾಮದ ಮುಖಂಡರಾದ ಡಾ.ಹದಡಿ ಯಲ್ಲಪ್ಪ, ಆರ್.ಡಿ.ಕೃಷ್ಣಮೂರ್ತಿ ಕುಲಕರ್ಣಿ, ಮಹಾಂತೇಶ ಗೌಡ್ರು, ಮುದೇಗೌಡ್ರು ನಾಗರಾಜ, ಓ.ಎನ್.ಸಿದ್ದಯ್ಯ ಒಡೆಯರ್  ಇದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *