Connect with us

Dvgsuddi Kannada | online news portal | Kannada news online

ದಾವಣಗೆರೆ: ಕಕ್ಕರಗೊಳ್ಳ ಗ್ರಾಮಕ್ಕೆ ಸುಸಜ್ಜಿತ ವಸತಿ ನಿಲಯ; ಜಿಲ್ಲಾ ಉಸ್ತುವಾರಿ ಸಚಿವ

dvg news 5

ದಾವಣಗೆರೆ

ದಾವಣಗೆರೆ: ಕಕ್ಕರಗೊಳ್ಳ ಗ್ರಾಮಕ್ಕೆ ಸುಸಜ್ಜಿತ ವಸತಿ ನಿಲಯ; ಜಿಲ್ಲಾ ಉಸ್ತುವಾರಿ ಸಚಿವ

ದಾವಣಗೆರೆ: 300 ವಿದ್ಯಾರ್ಥಿಗಳಿಗೆ ವಸತಿ ಕಲ್ಪಿಸುವ ಸುಸಜ್ಜಿತ ವಸತಿ ನಿಲಯವನ್ನು ಕಕ್ಕರಗೊಳ್ಳ ಗ್ರಾಮಕ್ಕೆ ಮಂಜೂರು ಮಾಡಲಾಗುವುದು ಎಂದು ಜಿಲ್ಲಾಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಭರವಸೆ ನೀಡಿದರು.

ಕಕ್ಕರಗೊಳ್ಳ ಗ್ರಾಮದಲ್ಲಿ ನೂತನ ಗ್ರಾಮ ದೇವತೆ ಊರಮ್ಮ ದೇವಿ ದೇವಸ್ಥಾನದಲೋಕಾರ್ಪಣೆ ಹಾಗೂ ಕಳಸಾರೋಹಣ ನೆರವೇರಿಸಿ ಮಾತನಾಡಿದರು. ನಮ್ಮ ಸರ್ಕಾರ ಎಲ್ಲಾ ಸಮುದಾಯದ ವಿದ್ಯಾರ್ಥಿಗಳನ್ನು ಸಮಾನವಾಗಿ ನೋಡುತ್ತದೆ ಎಂದರು.

24 ತಾಸು ನೀರಿನ ಸೌಲಭ್ಯ

ಇದೇ ಸಂದರ್ಭದಲ್ಲಿ ಗ್ರಾಮದಲ್ಲಿ ಸಂಸದರ ಅನುದಾನದಲ್ಲಿ ನೂತನ ಬಸ್ ನಿಲ್ದಾಣ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಯಿತು. ಜಲಜೀವನ್ ಮಿಷನ್ ಮೂಲಕ ಗ್ರಾಮೀಣ ಭಾಗದಲ್ಲಿ 24 ತಾಸು ನೀರಿನ ಸೌಲಭ್ಯ ಕಲ್ಪಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಕಕ್ಕರಗೊಳ್ಳ ಗ್ರಾಮದಲ್ಲಿಯೂ 24 ತಾಸು ನೀರು ಪೂರೈಸಲಾಗುವುದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.

ಗ್ರಾಮದ ಮುಖಂಡರಾದ ಕೆ.ಜಿ.ಬಸವನಗೌಡ್ರು, ದಾವಣಗೆರೆ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಬಿ.ಡಿ.ಕುಂಬಾರ್, ಊರಿನ ಮುಖಂಡರು ಉಪಸ್ಥಿತರಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top