Connect with us

Dvgsuddi Kannada | online news portal | Kannada news online

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

karnataka govt

ದಾವಣಗೆರೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ ಮತ್ತು ಪ.ವರ್ಗದ ಪಿ.ಯು.ಸಿ. ಐ.ಟಿ.ಐ. ಮತ್ತು ಡಿಪ್ಲೊಮಾ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು https://shp.karnataka.gov.in/bcwd ಆನ್‍ಲೈನ್‍ನಲ್ಲಿ ಜೂನ್ 20 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.

ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ ಸೈಟ್ https://bcwd.karnataka.gov.in ನ್ನು ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ, ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ದೂ.ಸಂ: 8050770004 ಮತ್ತು 8050770005.ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಲು ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top