ದಾವಣಗೆರೆ: ಕರ್ನಾಟಕ ಸರ್ಕಾರ, ಕೃಷಿ ಇಲಾಖೆಯ ಮೂಲಕ ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮದಡಿ ಕಣ್ಮರೆ ಆಗುತ್ತಿರುವ ಹಾಗೂ ನಶಿಸಿ ಹೋಗುತ್ತಿರುವ ಸ್ಥಳೀಯ ಬೆಳೆಗಳ ತಳಿಗಳನ್ನು ಸಂರಕ್ಷಣೆ ಹಾಗೂ ಸಂಗ್ರಹಿಸುವ ಉದ್ದೇಶ ಹೊಂದಿದೆ. ಇದಕ್ಕಾಗಿ ರೈತರು ನೋಂದಣಿಗೆ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ.
ದೇಶಿ ತಳಿಗಳನ್ನು ಸಂರಕ್ಷಿಸುತ್ತಿರುವ ರೈತರಿಗೆ ಬೆಂಬಲ ನೀಡುವ ಜೊತೆಗೆ ದೇಸಿ ತಳಿ ಬೀಜಗಳನ್ನು ಜನಪ್ರಿಯಗೊಳಿಸಲು ಕ್ರಮ ಜರುಗಿಸಲಾಗುತ್ತಿದೆ. ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಿ ನೋಂದಾಯಿಸಲು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.



