ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ನವಿಲೇಹಾಳ ಗ್ರಾಮದಲ್ಲಿ ಹತ್ತು ವರ್ಷಗಳ ಹಿಂದೆ ಲಂಚ ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮ ಲೆಕ್ಕಾಧಿಕಾರಿ ತಿಪ್ಪೇಸ್ವಾಮಿಗೆ ಎರಡು ವರ್ಷ ಶಿಕ್ಷೆ ಹಾಗೂ 20 ಸಾವಿರ ದಂಡ ಹಾಗೂ ಗ್ರಾಮ ಸಹಾಯಕ ಜಗದೀಶ್‌ಗೆ ಒಂದು ವರ್ಷ ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿ ಜಿಲ್ಲಾ ಮತ್ತು ಸೆಷನ್ಸ್ ಹಾಗೂ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಬಿ. ಗೀತಾ ಆದೇಶಿಸಿದ್ದಾರೆ.
2010ರಲ್ಲಿ ನವಿಲೇಹಾಳ ಗ್ರಾಮದ ಗೋವರ್ಧನ ಗಿರಿಶ್ಯಾಮ್ ಅವರಿಗೆ ಹಕ್ಕು ಪತ್ರ ನೀಡಲು 2,000 ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದರು. 2012 ರಲ್ಲಿ ಪ್ರಕರಣವು ನ್ಯಾಯಾಲಯದಲ್ಲಿ ದಾಖಲಾಗಿತ್ತು.