ದಾವಣಗೆರೆ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಿಗೆ ಪ್ರಸಕ್ತ ಸಾಲಿಗೆ ವಿಶೇಷ ವರ್ಗಗಳ ಅಭ್ಯರ್ಥಿಗಳಿಗೆ 6ನೇ ತರಗತಿಗೆ ಪ್ರವೇಶ ಪರೀಕ್ಷೆ ಇಲ್ಲದೇ ನೇರ ದಾಖಲಾತಿಗೆ ಅವಕಾಶ ಕಲ್ಪಿಸಲಾಗಿದೆ.
41,500 ಅಭ್ಯರ್ಥಿಗಳ ಆಯ್ಕೆ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾಗಾಂಧಿ, ಡಾ|| ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ ಮತ್ತು ಶ್ರೀ ನಾರಾಯಣಗುರು ಇತ್ಯಾದಿ ಹೆಸರಿನ ಒಟ್ಟು 817 ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಒಟ್ಟು 41,500 ಸ್ಥಾನಗಳು ಲಭ್ಯವಿರುತ್ತವೆ. ಈ ಸ್ಥಾನಗಳಿಗೆ ಎರಡು ವಿಧಾನಗಳ ಮೂಲಕ ದಾಖಲಾತಿ ಪ್ರಕ್ರಿಯೆಯನ್ನು ಕೈಗೊಳ್ಳಲಾಗಿದೆ.
ವಿಶೇಷ ವರ್ಗಗಳ ಅಭ್ಯರ್ಥಿಗಳಿಗೆ ಪ್ರವೇಶ ಪರೀಕ್ಷೆ ಇಲ್ಲದೆ ನೇರ ದಾಖಲಾತಿ
ಪ್ರವೇಶ ಪರೀಕ್ಷೆ ಮೂಲಕ ದಾಖಲಾತಿ ಪ್ರಕ್ರಿಯನ್ನು ಶಾಲೆಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಿರ್ವಹಿಸಲಾಗುತ್ತಿದೆ. ಇದರಲ್ಲಿ ಶೇ.50 ರಷ್ಟು (20,750) ಸ್ಥಾನಗಳನ್ನು ಪ್ರವೇಶ ಪರೀಕ್ಷೆ ಮೂಲಕ ದಾಖಲಾತಿ ಹಾಗೂ ಶೇ.50 ರಷ್ಟು (20,750) ಸ್ನಾನಗಳನ್ನು ವಿಶೇಷ ವರ್ಗಗಳ ಅಭ್ಯರ್ಥಿಗಳಿಗೆ ಪ್ರವೇಶ ಪರೀಕ್ಷೆ ಇಲ್ಲದೇ ನೇರ ದಾಖಲಾತಿ ಮಾಡಿಕೊಳ್ಳುವ ಮೂಲಕ ಅವಕಾಶವನ್ನು ಕಲ್ಪಿಸಲಾಗಿದೆ. ವಿಶೇಷ ವರ್ಗಗಳ ಅಭ್ಯರ್ಥಿಗಳಿಗೆ ಪ್ರವೇಶ ಪರೀಕ್ಷೆ ಇಲ್ಲದೇ ನೇರ ದಾಖಲಾತಿ ಮಾಡಿಕೊಳ್ಳಲಾಗುವುದು.
ವಿಶೇಷ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ನೇರವಾಗಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ವಸತಿ ಶಾಲೆಗಳಿಗೆ ನೇರವಾಗಿ ದಾಖಲಾತಿಯನ್ನು ಮಾಡಿಕೊಳ್ಳುಲು ವೆಬ್ ಸೈಟ್ : https://kreis.karnataka.gov.in ನಲ್ಲಿ ಸಂಪರ್ಕಿಸಬಹುದೆಂದು ಜಿ.ಪಂ ಸಿಇಓ ಸುರೇಶ್.ಬಿ.ಇಟ್ನಾಳ್ ತಿಳಿಸಿದ್ದಾರೆ.