ದಾವಣಗೆರೆ: ನೇಕಾರ ಸಮ್ಮಾನ್ ಯೋಜನೆಯಡಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರು ಹಾಗೂ ನೇಕಾರಿಕೆಗೆ ಸಂಬಂಧಿಸಿದ ಮಗ್ಗ ಪೂರ್ವ ಚಟುವಟಿಕೆಗಳಲ್ಲಿ ತೊಡಗಿರುವ ನೇಕಾರರಿಗೆ ವಾರ್ಷಿಕ ಆರ್ಥಿಕ ನೆರವು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಎಲ್ಲಿ ಅರ್ಜಿ ಸಲ್ಲಿಸಬೇಕು..?
ಅರ್ಜಿ ನಮೂನೆಯನ್ನು ಉಪನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ರಾಮಾಂಜನೇಯ ಪ್ಲಾಜಾ, ಕಾಲೇಜ್ ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಇಲ್ಲಿ ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 30ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08192-262362 ಅನ್ನು ಸಂಪರ್ಕಿಸಲು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.



