ದಾವಣಗೆರೆ: ಜಿಲ್ಲಾ ಮಡಿವಾಳ ಮಾಚಿದೇವ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ನಗರದ ಶ್ರೀ ಮಡಿವಾಳ ಮಾಚಿದೇವ ಸಮುದಾಯ ಭವನದಲ್ಲಿ ಆಗಸ್ಟ್ 17ರಂದು ಮಡಿವಾಳ ಸಮುದಾಯದ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಮುದಾಯದ ವಿದ್ಯಾರ್ಥಿ ಗಳು ಅರ್ಜಿ ಸಲ್ಲಿಸಲು ಜು.31 ಅಂತಿಮ ದಿನಾಂಕವಾಗಿದೆ ಎಂದು ಜಿಲ್ಲಾ ಮಡಿವಾಳ ಮಾಚಿದೇವ ಸಂಘದ ಜಿಲ್ಲಾಧ್ಯಕ್ಷ ಎಂ. ನಾಗೇಂದ್ರಪ್ಪ ತಿಳಿಸಿದ್ದಾರೆ.
2024-25ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಶೇಕಡಾ 70ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಇದೇ ದಿನಾಂಕ 31ರೊಳಗೆ ತಮ್ಮ ಕೈಬರಹದ ಅರ್ಜಿಗಳನ್ನು ಶ್ರೀ ಮಡಿವಾಳ ಮಾಚಿದೇವ ಸಮುದಾಯ ಭವನ, ದಾವಣಗೆರೆ ಇಲ್ಲಿಗೆ ಖುದ್ದಾಗಿ ತಲುಪಿಸಬೇಕು.



