Connect with us

Dvgsuddi Kannada | online news portal | Kannada news online

ದಾವಣಗೆರೆ: ಮೆಟ್ರಿಕ್‍ ನಂತರ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ದಾವಣಗೆರೆ

ದಾವಣಗೆರೆ: ಮೆಟ್ರಿಕ್‍ ನಂತರ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ದಾವಣಗೆರೆ:  2021-22 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ ನೀಡಲು ಆಹ್ವಾನಿಸಲಾಗಿದ್ದ ಅರ್ಜಿ ಅವಧಿಯನ್ನು ನ.30 ರವರೆಗೆ ವಿಸ್ತರಿಸಲಾಗಿದೆ.

ಈ ಹಿಂದೆ ಅರ್ಜಿ ಸಲ್ಲಿಕೆ ಅಂತಿಮ ದಿನವನ್ನು ಅ.10 ಕ್ಕೆ ನಿಗದಿಗೊಳಿಸಲಾಗಿತ್ತು.ಪೋಷಕರು/ವಿದ್ಯಾರ್ಥಿಗಳು/ಶಿಕ್ಷಣ ಸಂಸ್ಥೆಗಳು ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸುವಂತೆ ಮಾಡಿದ ಮನವಿ ಮೇರೆಗೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ನ.31 ಕ್ಕೆ ವಿಸ್ತರಿಸಲಾಗಿದೆ. ಆನ್‍ಲೈನ್ ಅರ್ಜಿ ಸಲ್ಲಿಸಲು ವೆಬ್‍ಸೈಟ್ www.ssp.postmatric.karnataka.gov.in/2122 ವಿಳಾಸವನ್ನು ಹಾಗೂ ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆ ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶದ ಬಗ್ಗೆ ಮಾಹಿತಿಗಾಗಿ www.bcwd.karnataka.gov.in ವೆಬ್‍ಸೈಟ್ ಭೇಟಿ ಮಾಡಬಹುದು. ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಣಿ ದೂರವಾಣಿ ಸಂಖ್ಯೆ 8050770005/8050770004, 080-35254757 ಇಮೇಲ್ bcwd.scholarship@karnataka.gov.in ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top