ದಾವಣಗೆರೆ: ಜಿಲ್ಲಾ ಆರ್ಯ ಈಡಿಗರ ಸಂಘದಿಂದ 2024-25ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ಶೇ 70 ಕ್ಕಿಂತ ಹೆಚ್ಚು ಅಂಕ ಪಡೆದ ಆರ್ಯ ಈಡಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ವಿನೋಬ ನಗರದ ಆರ್ಯ ಈಡಿಗರ ಹಾಸ್ಟೆಲ್ ಅಥವಾ ತಮ್ಮ ತಾಲ್ಲೂಕಿನ ಸಂಘದ ಕಚೇರಿಯಲ್ಲಿ ಅರ್ಜಿ ಪಡೆದು, ಅಂಕಪಟ್ಟಿ ಹಾಗೂ ಇನ್ನಿತರ ಅಗತ್ಯ ದಾಖಲೆಗಳೊಂದಿಗೆ
ಆಗಸ್ಟ್ 31ರೊಳಗೆ ಅರ್ಜಿ ಸಲ್ಲಿಸಬಹುದು.



