ದಾವಣಗೆರೆ: ಕರ್ನಾಟಕ ಏಡ್ಸ್ ನಿಯಂತ್ರಣ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ರಕ್ತಕೇಂದ್ರ, ಚಿಗಟೇರಿ ಜಿಲ್ಲಾಸ್ಪತ್ರೆ, ಯುವಜನ ಮತ್ತು ಕ್ರೀಡಾ ಇಲಾಖೆ, ದಾವಣಗೆರೆ ವಿಶ್ವವಿದ್ಯಾನಿಲಯ, ಎನ್.ಎಸ್.ಎಸ್. ಕೋಶ ಹಾಗೂ ಜಿಲ್ಲೆಯ ವಿವಿಧ ರಕ್ತ ಕೇಂದ್ರ, ಜಿಲ್ಲಾ ಆರ್.ಆರ್.ಸಿ ಕಾಲೇಜ್ ಮತ್ತು ವಿವಿಧ ಸ್ವಯಂ ಸೇವಾ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಯುವಜನೋತ್ಸವ ಪ್ರಯುಕ್ತ ಆಗಸ್ಟ್ 19 ರಂದು ಬೆಳಿಗ್ಗೆ 8 ಗಂಟೆಗೆ ಸಿ.ಜಿ.ಆಸ್ಪತ್ರೆ ಮುಂಭಾಗ “ಮ್ಯಾರಾಥಾನ್ ಸ್ಪರ್ಧೆ” (marathon) ಆಯೋಜಿಸಲಾಗಿದೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠಲರಾವ್ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ, ದಾವಣಗೆರೆ ವಿ.ವಿ ಎನ್‍ಎಸ್‍ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ಅಶೋಕ್ ಕುಮಾರ್ ವಿ. ಪಾಳೇದ, ಜಿಲ್ಲಾ ಸರ್ಜನ್ ಡಾ.ನಾಗೇಂದ್ರಪ್ಪ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಅಧೀಕ್ಷಕಿ ಡಾ.ಎಸ್.ಪಿ.ಮಧು, ಜಿಲ್ಲಾ ಆಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ.ಎಸ್.ಕೆ.ನಾಗವೇಣಿ, ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ ಕಾರ್ಯಕ್ರಮ ಅಧಿಕಾರಿ ಡಾ.ಪಿ.ಡಿ.ಮುರುಳೀಧರ, ಸಿ.ಜಿ.ಆಸ್ಪತ್ರೆಯ ಎ.ಆರ್.ಟಿ ಪ್ಲಸ್ ನೋಡಲ್ ಅಧಿಕಾರಿ ಡಾ.ಕೆ.ಶಿವರಾಜ್, ಜಿಲ್ಲಾಸ್ಪತ್ರೆಯ ರಕ್ತ ಕೇಂದ್ರ ವೈದ್ಯಾಧಿಕಾರಿ ಡಾ.ಹೆಚ್.ಗೀತಾ ಹಾಗೂ ಎಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ತಾಲ್ಲೂಕು ಹಾಗೂ ನಗರ ಪ್ರಾಥಮಿಕ ಆರೋಗ್ಯಾಧಿಕಾರಿಗಳು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.



