ದಾವಣಗೆರೆ: ಚುನಾವಣೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಬೇಕಾ…? ಅಥವಾ ತಿದ್ದುಪಡಿ ಬಯಸುವರಿಗೆ ಇಲ್ಲಿದೆ ಅವಕಾಶ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ದಾವಣಗೆರೆ ಉತ್ತರ ಹಾಗೂ  ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರಗಳ ಭಾವಚಿತ್ರವಿರುವ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2022ರ ಕಾರ್ಯವನ್ನು ನವೆಂಬರ್ 08 ರಿಂದ ಡಿಸೆಂಬರ್ 12ರವರೆಗೆ ಹಮ್ಮಿಕೊಳ್ಳಲಾಗಿದೆ.

01.01.2022ಕ್ಕೆ 18 ವರ್ಷ ಪೂರ್ಣಗೊಳ್ಳುವವರು, ಸಂಬಂಧಿಸಿದ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಲ್ಲದವರು, ಹೆಸರು ಕೈಬಿಟ್ಟು ಹೋಗಿರುವವರು, ಮತದಾರರ ಪಟ್ಟಿಯಲ್ಲಿ ಹೆಸರುಗಳನ್ನು ತಿದ್ದುಪಡಿ ಮಾಡಿಬೇಕಾದಲ್ಲಿ ಮತ್ತು ಒಂದೇ ವಿಧಾನಸಭಾ ಕ್ಷೇತ್ರದ ಮತದಾರರು ಬೇರೆ ಮತಗಟ್ಟಿಗೆ ವರ್ಗಾಯಿಸಬೇಕಾಗಿದ್ದಲ್ಲಿ ನಿಗಧಿಪಡಿಸಿರುವ ನಮೂನೆಗಳಲ್ಲಿ ಅರ್ಜಿಯನ್ನು ಭರ್ತಿ ಮಾಡಿ ತಮ್ಮ ವ್ಯಾಪ್ತಿಯ ಮತದಾನ ಕೇಂದ್ರದ ಮತಗಟ್ಟೆ ಅಧಿಕಾರಿಗಳಲ್ಲಿ ಅರ್ಜಿ ಸಲ್ಲಿಸಿ ಸ್ವೀಕೃತಿ ಪಡೆಯಬಹುದು. ಅದಲ್ಲದೇ ತಿತಿತಿ.ಟಿvsಠಿ.iಟಿ ಅಂತರ್ಜಾಲದ(ಇಂಟರ್ ನೆಟ್) ತಂತ್ರಾಂಶದಲ್ಲಿ ಹಾಗೂ voter help line App ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

ಈ ವಿಶೇಷ ಪರಿಷ್ಕರಣೆ ಕಾರ್ಯವನ್ನು ಇನ್ನಷ್ಟು ಸಮರ್ಪವಾಗಿ ಕೈಗೊಂಡು ಪ್ರತಿ ಮತದಾರನ ಹೆಸರನ್ನು ಮತಪಟ್ಟಿಯಲ್ಲಿ ಸೇರ್ಪಡೆಗೊಳಿಸುವ ಉದ್ದೇಶದಿಂದ ಅರ್ಜಿಗಳನ್ನು ದಿ:08.11.2021 ರಿಂದ 08.12.2021ರವರೆಗೆ ಸ್ವೀಕರಿಸಲಾಗುವುದು. ಅಲ್ಲದೇ ಈ ಸವಧಿಯಲ್ಲಿ ದಿ:07.11.2021, ದಿ:14.11.2021, ದಿ:21.11.2021 ಮತ್ತು 28.11.2021 ಭಾನುವಾರಗಳಂದು ಸಹಾ ವಿಶೇಷ ಕಾರ್ಯಾಚರಣೆ ದಿನಗÀಳಾಗಿರುವುದರಿಂದ ಈ ದಿನಗಳಂದು ಸಹಾ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದೆಂದು ತಿಳಿಸಿದೆ. ಈ ಅವಕಾಶವನ್ನು ಸಾರ್ವಜನಿಕರು/ಮತದಾರರು ಸದುಪಯೋಗ ಪಡಿಸಿಕೊಳ್ಳಲು ಮತದಾರರ ನೋಂದಣಾಧಿಕಾರಿಗಳು ಹಾಗೂ ಉಪ ಆಯುಕ್ತರು ಮಹಾನಗರಪಾಲಿಕೆ ಇವರು ತಿಳಿಸಿರುತ್ತಾರೆಂದು ಪ್ರಕಟಣೆ ತಿಳಿಸಿದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *