ದಾವಣಗೆರೆ: ನಗರದ ಹೈಸ್ಕೂಲ್ ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಗಣಪತಿ ಮೂರ್ತಿಯ ವಿಸರ್ಜನಾ ಮೆರವಣಿಗೆಯು ಸೆ.20 ರಂದು ನಡೆಯಲಿದೆ.
ಈ ವೇಳೆ ಯಾವುದೇ ಅಹಿತಕರ ಘಟನೆಗಳು
ಸಂಭವಿಸದಂತೆ ಹಾಗೂ ಕಾನೂನುಸುವ್ಯವಸ್ಥೆ ಕಾಯ್ದುಕೊಳ್ಳುವ ಸಲುವಾಗಿಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೆಳಿಗ್ಗೆ 6 ರಿಂದ ಮಧ್ಯರಾತ್ರಿ 12ರ ವರೆಗೆ ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.



