ದಾವಣಗೆರೆ: ಜನನ ಮತ್ತು ಮರಣ ಪ್ರಕರಣಗಳಲ್ಲಿ ಶೇ. 100ರಷ್ಟು ಇ-ಜನ್ಮ ತಂತ್ರಾಂಶದಲ್ಲಿ ನೋಂದಣಿಯಾಗಬೇಕು. ಇದರಿಂದ ಸರ್ಕಾರದ ಸೌಲಭ್ಯಗಳನ್ನು ಮರಣ ಹೊಂದಿದರೂ ಪಡೆಯುತ್ತಿರುವ ಮಾಹಿತಿ ಸಿಗಲಿದೆ.ಈ ಬಗ್ಗೆ ಅನೇಕರು ಇಂತಹ ಸೌಲಭ್ಯ ಪಡೆಯುತ್ತಿದ್ದು, ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ನಾಗರಿಕ ನೋಂದಣಿ ಪದ್ದತಿಯ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮರಣದ ಬಗ್ಗೆ ಹೆಚ್ಚಾಗಿ ವರದಿಯಾಗುತ್ತಿಲ್ಲ. ಮರಣ ಪ್ರಮಾಣದಲ್ಲಿ ಮಹಿಳೆಯರ ಸಂಖ್ಯೆ ಕಡಿಮೆ ಇದ್ದು, ಪುರುಷರ ಸಂಖ್ಯೆ ಹೆಚ್ಚಾಗಿರುತ್ತದೆ. ಜನನ, ಮರಣ ದಾಖಲೆಗಳು ಸಾರ್ವಜನಿಕರಿಗೆ ತಮ್ಮ ಶೈಕ್ಷಣಿಕ ಹಾಗೂ ಆರ್ಥಿಕ ವ್ಯವಹಾರಗಳು ಸೇರಿದಂತೆ ವಿವಿಧ ಕೆಲಸಗಳಿಗೆ ಅತ್ಯವಶ್ಯವಾಗಿದೆ ಎಙದರು.
ಅವುಗಳ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಬೇಕು. ಆಹಾರ ಮತ್ತು ನಾಗರಿಕರ ಸರಬರಾಜು ಇಲಾಖೆಯವರು ತಮ್ಮ ಮೂಲಕವೂ ಜನನ ಮರಣದ ಮಾಹಿತಿಯನ್ನು ನೀಡಬೇಕು. ಗ್ರಾಮೀಣ ಮಟ್ಟದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ನೋಂದಣಿ ಮಾಡಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸರ್ಕಾರಿ ಆಸ್ಪತ್ರೆಗಳ ವೈದ್ಯಾಧಿಕಾರಿಗಳು ಮಾಹಿತಿಯನ್ನು ನೋಂದಣಿ ಮಾಡಬೇಕು. ಖಾಸಗಿ ಆಸ್ಪತ್ರೆಗಳ ಮಾಹಿತಿಯೂ ಪೋರ್ಟಲ್‍ನಲ್ಲಿ ಅಪ್‍ಲೋಡ್ ಆಗಬೇಕು ಎಂದರು.
ಎಫ್‍ಐಆರ್ ದಾಖಲಿಸಲು ಸೂಚನೆ
ಶಾಸಕರುಗಳಿಗೆ ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳುವ ಕುರಿತು ಮಾನದಂಡಗಳ ಬಗ್ಗೆ ಮಾಹಿತಿ ನೀಡುವಂತೆ ಹಾಗೂ ವಿಮಾ ಕಂಪನಿಯವರು ಬೆಳೆ ಕಟಾವು ಪ್ರಯೋಗಗಳಲ್ಲಿ ಸುಳ್ಳು ಮಾಹಿತಿ ಕಂಡು ಬಂದಲ್ಲಿ ಎಫ್‍ಐಆರ್ ದಾಖಲಿಸುವಂತೆ ಡಿಎಸ್‍ಒ ಅಧಿಕಾರಿಗೆ ಸೂಚಿಸಿದರು.
ಶೇ.100 ಪ್ರತಿಶತ ಗುರಿ ಸಾಧಿಸಬೇಕು
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಜಿಲ್ಲೆಯಲ್ಲಿ ಇರುವ ಎಲ್ಲಾ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರಿಗೆ , ಆಶಾ ಕಾರ್ಯಕರ್ತರಿಗಳಿಗೆ ಹಾಗೂ ವೈದ್ಯಾಧಿಕಾರಿಗಳಿ ಪಿ.ಹೆಚ್.ಸಿ ರವರಿಗೆ ಜನನ ಮತ್ತು ಮರಣ ನೋಂದಣಿ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಿ ಶೇ.100 ಪ್ರತಿಶತ ಗುರಿ ಸಾಧಿಸಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಬರುವ ಎಲ್ಲಾ ಅಂಗನವಾಡಿ ಕಾರ್ಯಕರ್ತರು ಜನನ ಮರಣ ನೋಂದಣಿ ಕಾರ್ಯದಲ್ಲಿ ಕಡ್ಡಾಯವಾಗಿ ಭಾಗವಹಿಸಿ ಶೇ.100 ಪ್ರತಿಶತ ಗುರಿ ಸಾಧಿಸಬೇಕೆಂದರು.
ಡಿ.ಎಸ್.ಓ ನೀಲಾ ಮಾತನಾಡಿ ಕಳೆದ ಜನವರಿಯಿಂದ ಸೆಪ್ಟೆಂಬರ್ ತಿಂಗಳವರೆಗೆ ಜನನ ಗಂಡು-10462, ಹೆಣ್ಣು-9787 ಸೇರಿ 20249, ಮರಣ ಸಂಖ್ಯೆ ಗಂಡು-7555, ಹೆಣ್ಣು-5724 ಸೇರಿ 13279 ನೋಂದಣಿಯಾಗಿವೆ. ಜಿಲ್ಲೆಯಲ್ಲಿ ಗ್ರಾಮೀಣ 916, ನಗರ 20 ಸೇರಿ ಒಟ್ಟು 936 ನೊಂದಣಿ ಘಟಕಗಳಿವೆ ಎಂದರು.
ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಅಂದಾಜು ಸಮೀಕ್ಷೆಯಲ್ಲಿ ಒಟ್ಟು ಜಿಲ್ಲೆಗೆ 1888 ಪ್ರಯೋಗಗಳನ್ನು ಹಂಚಿಕೆ ಮಾಡಲಾಗಿದೆ.ಜಿಲ್ಲಾ ಪಂಚಾಯತ್ ಸಿಇಒ ಗಿತ್ತೆ ಮಾಧವ್ ವಿಠ್ಠಲರಾವ್, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಡಿಹೆಚ್‍ಓ ಡಾ.ಷಣ್ಮುಖಪ್ಪ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.



