ದಾವಣಗೆರೆ: ಗ್ಯಾರಂಟಿ ಯೋಜನೆ ಯುವನಿಧಿ ಫಲಾನುಭವಿಗಳಿಗೆ ಡಿಬಿಟಿ (Direct Benefit Transfer) ಮೂಲಕ ಹಣ ಸಂದಾಯ ಮಾಡಲಾಗುತ್ತಿದ್ದು, ಫಲಾನುಭವಿಗಳಿಗೆ ನಂತರದ ತಿಂಗಳುಗಳ ಯುವನಿಧಿ (yuvanidhi) ಹಣ ಸಂದಾಯವಾಗಲು ಕಡ್ಡಾಯವಾಗಿ ಪ್ರತಿ ತಿಂಗಳ 25ನೇ ತಾರೀಖಿನೊಳಗೆ ಸ್ವಯಂ ದೃಢೀಕರಣ ಮಾಡಿಕೊಳ್ಳಬೇಕಾಗಿರುತ್ತದೆ.
ಇದನ್ನೂ ಓದಿ: ದಾವಣಗೆರೆಯಲ್ಲಿ ಐಟಿ, ಬಿಟಿ ಕಂಪನಿಗಳ ಸ್ಥಾಪನೆ | 60 ದಿನಗಳಲ್ಲಿ 10ಕ್ಕೂ ಹೆಚ್ಚು ಐಟಿ ಕಂಪನಿ ಆಗಮನ- ಸ್ಥಳೀಯರಿಗೆ ಉದ್ಯೋಗ; ಸಂಸದೆ
ಯುವನಿಧಿ ಯೋಜನೆಯ ಫಲಾನುಭವಿಗಳು ಮೊಬೈಲ್ ಮೂಲಕ ಅಥವಾ ಹತ್ತಿರದ ದಾವಣಗೆರೆ ಒನ್, ಗ್ರಾಮ ಒನ್ ಸೆಂಟರ್ಗಳಲ್ಲಿ ಸ್ವಯಂ ದೃಢೀಕರಣ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾಡಳಿತ ಭವನ, ದಾವಣಗೆರೆ ಇವರನ್ನು ಸಂಪರ್ಕಿಸಬಹುದೆಂದು ಇಲಾಖೆಯ ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.



