ದಾವಣಗೆರೆ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ ಹಾಗೂ ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯ ಇವರುಗಳ ಸಂಯುಕ್ತಾಶ್ರಯದಲ್ಲಿ ನ.8 ರಿಂದ 17 ರವರೆಗೆ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರವದ ಉದ್ಘಾಟನಾ ಸಮಾರಂಭವನ್ನು ನ.08 ರ ಬೆಳಿಗ್ಗೆ 11.30 ಕ್ಕೆ ನಗರದ ಬಿ.ಐ.ಇ.ಟಿ ಕಾಲೇಜ್, ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗದ ಸೆಮಿನಾರ್ ಹಾಲ್‍ನಲ್ಲಿ ಆಯೋಜಿಸಲಾಗಿದ್ದು, ಸರ್ಕಾರಿ ಐ.ಟಿ.ಐ ಕಾಲೇಜು ಪ್ರಾಂಶುಪಾಲ ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಾದ ಏಕನಾಥ.ಎನ್ ಉದ್ಘಾಟಿಸುವರು. ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಪಿ.ಆನಂದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಬಿ.ಐ.ಇ.ಟಿ ಕಾಲೇಜು ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಜಿ.ಮಾನವೇಂದ್ರ ಆಗಮಿಸುವರು. ಸಿಡಾಕ್ ಜಂಟಿ ನಿರ್ದೇಶಕ ಆರ್.ಪಿ.ಪಾಟೀಲ್ ಪ್ರಾಸ್ತವಿಕವಾಗಿ ಮಾತನಾಡುವರು. ಸಂಪನ್ಮೂಲ ವ್ಯಕ್ತಿಯಾಗಿ ಜನಶಿಕ್ಷಣ ಸಂಸ್ಥಾನ ನಿವೃತ್ತ ನಿರ್ದೇಶಕ ಮುಕುಂದಪ್ಪ.ಬಿ ಆಗಮಿಸುವರು ಎಂದು ಜಿಲ್ಲಾ ಸಿಡಾಕ್ ಜಂಟಿ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.