ದಾವಣಗೆರೆ: ಉದ್ಯೋಗ ಖಾತರಿ ಯೋಜನೆ ಹೆಸರು ಬದಲಾವಣೆಗೆ ಸಂಸದೆ ಅಸಮಧಾನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
3 Min Read

ದಾವಣಗೆರೆ: ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಮಹಾಪುರುಷನ ಹೆಸರಿಟ್ಟ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ)ಯೋಜನೆಯ ಹೆಸರನ್ನೇ ಅಳಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿದೆ ಎಂದು ಸಂಸದೆ ಡಾ; ಪ್ರಭಾ ಮಲ್ಲಿಕಾರ್ಜುನ್ ಅಸಮಧಾನ ವ್ಯಕ್ತಪಡಿಸಿದರು.

ದಾವಣಗೆರೆ: ಮೊಬೈಲ್ ಗೆ ಬಂದ ಪಾರ್ಟ್ ಟೈಮ್ ಜಾಬ್ ಸಂದೇಶ | ಲಿಂಕ್ ಮೇಲೆ ಕ್ಲಿಕ್ ಮಾಡಿ 15.72 ಲಕ್ಷ ಕಳೆದುಕೊಂಡ ವ್ಯಕ್ತಿ

ಮಾಯಕೊಂಡ ಕ್ಷೇತ್ರ ವ್ಯಾಪ್ತಿಯ ದಾವಣಗೆರೆ ತಾ; ಹೊನ್ನೂರು ಗ್ರಾಮದಲ್ಲಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಆಯೋಜಿಸಿದ್ದ ಮನರೇಗಾ ಕಾಮಗಾರಿ ಸ್ಥಳದಲ್ಲಿ ಆರೋಗ್ಯ ತಪಾಸಣಾ ಶಿಬಿರ ಮತ್ತು ಕೂಲಿಕಾರರ ಕುಂದುಕೊರತೆಗಳ ಪರಿಶೀಲನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅಭಿವೃದ್ಧಿ ಕಾಮಗಾರಿ ದೆಹಲಿ ಮಟ್ಟದಲ್ಲಿ ತೀರ್ಮಾನ ಆಗಬೇಕಿಲ್ಲ. ಪಂಚಾಯತ್‍ನಲ್ಲಿ ಗ್ರಾಮಸಭೆ ಮೂಲಕ ಗ್ರಾಪಂ ಸದಸ್ಯರು ತೀರ್ಮಾನ ಕೈಗೊಂಡು ನಮ್ಮ ಹಳ್ಳಿಯಲ್ಲಿ ಇಷ್ಟು ಶೌಚಾಲಯ ಆಗಬೇಕು. ಇಷ್ಟು ಶಾಲೆಗಳ ಅಭಿವೃದ್ಧಿ ಆಗಬೇಕು. ನಮ್ಮ ಹೊಲದ ರಸ್ತೆಗಳು ಅಭಿವೃದ್ಧಿ ಆಗಬೇಕು. ಜಲಮೂಲಗಳ ಶುದ್ದೀಕರಣ, ಹೂಳೆತ್ತಿ ಅಂತರ್ಜಲ ಹೆಚ್ಚಳದ ಮೂಲಕ ಸ್ವಾವಲಂಬಿ ಹಳ್ಳಿಯ ರೂಪುರೇಷ ಹಾಕಿಕೊಂಡು ಪಂಚಾಯತ್‍ನಲ್ಲಿ ತೀರ್ಮಾನ ಮಾಡಿಕೊಂಡರೆ ಜನರು ಉದ್ಯೋಗ ಖಾತರಿಯಲ್ಲಿ ಹಳ್ಳಿಯನ್ನು ಕಟ್ಟುವ ಕೆಲಸ ಮಾಡುತ್ತಾರೆ ಎಂದರು.

ದಾವಣಗೆರೆ: ಅಡಿಕೆಗೆ ಭರ್ಜರಿ ಬೆಲೆ; 60 ಸಾವಿರದತ್ತ ಇಂದಿನ ದರ

ಉದ್ಯೋಗ ಖಾತರಿ ಯೋಜನೆ ಅನುಷ್ಟಾನದಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಉತ್ತಮ ಕೆಲಸ ಮಾಡಿ ಜನರಿಗೆ ಉದ್ಯೋಗ ನೀಡಿದ್ದಾರೆ. ಈ ನಿಟ್ಟಿನಲ್ಲಿ ಹೊನ್ನೂರು ಗ್ರಾಪಂನಲ್ಲಿ ಅಧಿಕಾರಿಗಳು ಒಳ್ಳೆಯ ಕೆಲಸ ಮಾಡಿದ್ದರಿಂದ ಇಲ್ಲಿನ ಗ್ರಾಪಂ ಉದ್ಯೋಗ ಖಾತರಿಯಲ್ಲಿ ನಂ.1 ಸ್ಥಾನ ಪಡೆದುಕೊಂಡಿದೆ ಎಂದು ಶ್ಲಾಘಿಸಿದರು.

ಗ್ರಾಮೀಣ ಆರ್ಥಿಕತೆಗೆ ಪೆಟ್ಟು

ಮನರೇಗಾದಿಂದ ದೇಶದಲ್ಲಿ 5 ರಿಂದ 6 ಕೋಟಿ ಜನ ಕೂಲಿಕಾರ್ಮಿಕರು ಆರ್ಥಿಕವಾಗಿ ಸಬಲರಾಗಿದ್ದಾರೆ. 2005 ರಿಂದ 2026 ರವರೆಗೆ ಸುಮಾರು 20 ವರ್ಷಗಳಿಂದ ಗ್ರಾಮಗಳ ಅಭಿವೃದ್ಧಿಗೆ ಮನರೇಗಾ ಯೋಜನೆ ಕಾರಣವಾಗಿತ್ತು. ಈಗ ಇದನ್ನು ಕೇಂದ್ರ ಸರ್ಕಾರ ಬದಲಾಯಿಸಿ ವಿಕಸಿತ ಭಾರತ-ಗ್ಯಾರಂಟೀ ಫಾರ್ ರೋಜಗಾರ್ ಮತ್ತು ಆವೀಜಿಕ ಮಿಷನ್ ವಿಬಿ-ಜಿ.ರಾಮ್ ಜಿ ಕಾಯ್ದೆ-2005 ಎಂದು ಬದಲಿಸಿದ್ದು ಹಳ್ಳಿ ಅಧಿಕಾರ ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಗೆ ಪೆಟ್ಟು ನೀಡಲು ಮುಂದಾಗಿದೆ ಎಂದರು.

ಶಾಸಕ ಕೆ.ಎಸ್.ಬಸವಂತಪ್ಪ ಹಳ್ಳಿ ಜನರ ದನಿಯಾಗಿ, ಅವರ ಕಷ್ಟ-ಸುಖಗಳನ್ನು ಅಂಚಿಕೊಂಡಿದ್ದಾರೆ. ಅವರು ಬಡವರ ಕಷ್ಟ-ಸುಖಗಳನ್ನು ಚೆನ್ನಾಗಿ ಅರಿತುಕೊಂಡಿದ್ದಾರೆ. ಅವರ ಜೊತೆಯಲ್ಲಿ ಮಾಯಕೊಂಡ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾದಾಗ ಅವರಿಂದ ಸಾಕಷ್ಟು ಕಲಿಯುವ ಅವಕಾಶ ಸಿಕ್ಕಿದೆ. ಸ್ವಯಂ ಉದ್ಯೋಗದಲ್ಲಿ ನೀವು ಹೇಗೆ ಆರ್ಥಿಕವಾಗಿ ಸಬಲರಾಗಬಹುದು ಎಂಬ ಬಗ್ಗೆ ತಿಳಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಸಕರಾದ ಕೆ.ಎಸ್.ಬಸವಂತಪ್ಪ ಮಾತನಾಡಿ, ದೇಶದಲ್ಲಿ ದುಡಿಯುವ ವರ್ಗಕ್ಕೆ ಕೆಲಸ ಕೊಡಬೇಕೆಂಬ ಉದ್ದೇಶದಿಂದ 2005ರಲ್ಲಿ ಯುಪಿಎ ಸರ್ಕಾರ ನೇತೃತ್ವ ವಹಿಸಿದ್ದ ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ‘ಮನರೇಗಾ’ ಯೋಜನೆ ಜಾರಿಗೊಳಿಸುವ ಮೂಲಕ ದುಡಿಯುವ ವರ್ಗಕ್ಕೆ ಕೆಲಸ ಕೊಟ್ಟು ಆರ್ಥಿಕವಾಗಿ ಸಬಲರನ್ನಾಗಿ ಮಾಡಿತು. ಅಂದಿನಿಂದ ಈವರೆಗೆ ದೇಶದ ಗ್ರಾಮೀಣ ಪ್ರದೇಶಗಳು ಅಭಿವೃದ್ಧಿ ಪಥದಲ್ಲಿ ಸಾಗುತ್ತಿವೆ. ಮನರೇಗಾ’ ಯೋಜನೆ ಜಾರಿಗೊಳ್ಳುವ ಪೂರ್ವದಲ್ಲಿ ಇಲ್ಲಿನ ಹಳ್ಳಿಯ ಜನರು ಮಹಾರಾಷ್ಟ್ರ, ಕೇರಳ ಸೇರಿದಂತೆ ಹೊರ ರಾಜ್ಯ ಹಾಗೂ ರಾಜ್ಯದ ಕಾಫಿನಾಡು ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಉದ್ಯೋಗ ಅರಸಿ ವಲಸೆ ಹೋಗುತ್ತಿದ್ದರು. ಯಾವಾಗ ಹಿಂದಿನ ಯುಪಿಎ ಸರ್ಕಾರ ‘ಮನರೇಗಾ’ ಯೋಜನೆ ಜಾರಿಗೊಳಿಸಿತು. ಅಂದಿನಿಂದ ಈವರೆಗೂ ಹಳ್ಳಿಯ ಜನರು ಬದುಕು ಕಂಡುಕೊಂಡು ಆರ್ಥಿಕವಾಗಿ ಸಬಲರಾದರು. ಆದರೆ ಈಗ ಕೇಂದ್ರ ಸರ್ಕಾರ ‘ಮನರೇಗಾ’ ಹೆಸರು ಬದಲಾಯಿಸುತ್ತಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ದಾವಣಗೆರೆ; ಫೆ.24,25 ರಂದು ನಗರ ದೇವತೆ ದುಗ್ಗಮ್ಮ ಜಾತ್ರೆ; ವಿಜೃಂಭಣೆಯಿಂದ ಆಚರಿಸಲು ತೀರ್ಮಾನ

ಕಾರ್ಯಕ್ರಮದಲ್ಲಿ ಜಿಪಂ ಸಿಇಓ ಗಿತ್ತೆ ಮಾಧವ ವಿಠ್ಠಲ್ ರಾವ್, ತಾಪಂ ಇಓ ರಾಮಭೋವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *