ದಾವಣಗೆರೆ: ದಿ. ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಅವರ ಸವಿನೆನಪಿಗಾಗಿ ದಾವಣಗೆರೆ ಇಲೆವೆನ್ಸ್ ಕ್ರಿಕೆಟ್ ಕ್ಲಬ್ ಹಾಗೂ ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘ ಸಹಯೋಗದೊಂದಿಗೆ ಐದು ದಿನಗಳ ಕಾಲ ರಾಷ್ಟ್ರಮಟ್ಟದ ಹೊನಲು ಬೆಳಕಿನ ಟೂರ್ನಿಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಈ ಬಗ್ಗೆ ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಮಾಹಿತಿ ನೀಡಿದ್ದು,ನ.25ರಿಂದ 28ರವರೆಗೆ ಎಸ್.ಎಸ್. ಶಾಮನೂರು ಡೈಮಂಡ್ ಹಾಗೂ ಶಿವಗಂಗಾ ಕಪ್ ರಾಷ್ಟ್ರ ಮಟ್ಟದ ಟೆನಿಸ್‍ಬಾಲ್ ಕ್ರಿಕೆಟ್ ಟೂರ್ನಿ ನಡೆಯಲಿದೆ. ಇಂದು (24) ಸಂಜೆ 6 ಗಂಟೆಗೆ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ಟೂರ್ನಿಯನ್ನು ಉದ್ಘಾಟಿಸಲಿದ್ದಾರೆ ಎಂದರು.
ಕ್ರಿಕೆಟ್ ಟೂರ್ನಿಯಲ್ಲಿ 32 ತಂಡಗಳು ಪಾಲ್ಗೊಳ್ಳಲಿವೆ. ಕರ್ನಾಟಕದ ವಿವಿಧೆಡೆಯಿಂದ 14 ತಂಡಗಳು, ದಾವಣಗೆರೆ ಜಿಲ್ಲೆಯ 12 ತಂಡಗಳು ಪಾಲ್ಗೊಳ್ಳಲಿವೆ. ಮಧ್ಯಪ್ರದೇಶ, ತಮಿಳುನಾಡು, ಮಹಾರಾಷ್ಟ್ರ, ಕೇರಳ ರಾಜ್ಯಗಳಿಂದ ಒಟ್ಟು 6 ತಂಡಗಳು ಬರಲಿವೆ. 400 ಕ್ರೀಡಾಪಟುಗಳು ಟೂರ್ನಿಗೆ ಬರುತ್ತಿದ್ದಾರೆ. ಎಲ್ಲಾ ಕ್ರೀಡಾಪಟುಗಳಿಗೂ ಊಟ-ವಸತಿ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಪ್ರಥಮ ಬಹುಮಾನ 3,55,555 ಹಾಗೂ ಶಾಮನೂರು ಡೈಮಂಡ್ ಕಪ್, ದ್ವಿತೀಯ ಬಹುಮಾನ 2,55,555 ಹಾಗೂ ಶಿವಗಂಗಾ ಕಪ್, ತೃತೀಯ ಬಹುಮಾನವಾಗಿ 1,25,555 ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು. ಉತ್ತಮ ಆಲ್‍ರೌಂಡರ್‌ಗೆ ಹೀರೋ ಹೋಂಡಾ ಬೈಕ್ ನೀಡಲಾಗುವುದು. ಸುಮಾರು 30 ಲಕ್ಷ ವೆಚ್ಚ ಮಾಡಲಾಗುತ್ತಿದೆ ಎಂದು ಹೇಳಿದರು.
ಜಯಪ್ರಕಾಶ್ ಗೌಡ, ‘ಮೂರನೇ ತೀರ್ಪುಗಾರರ ವ್ಯವಸ್ಥೆ ಇರಲಿದೆ. ಪಂದ್ಯಗಳನ್ನು ಎಂಎಸ್ ಪೋರ್ಟ್ ಯೂಟ್ಯೂಬ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಾಗುವುದುಎಂದರು. ಸಂಘದ ಉಪಾಧ್ಯಕ್ಷ ಶಿವಗಂಗಾ ಶ್ರೀನಿವಾಸ, ಕಾರ್ಯದರ್ಶಿ ಕುರುಡಿ ಗಿರೀಶ್ ಇದ್ದರು.